ಬೆಂಗಳೂರು: ‘ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್ ದಂಗೆಗೆ ಸಂಬಂಧಿಸಿದಂತೆ ಇಷ್ಟು ದಿನ ಸತ್ಯವನ್ನು ಮುಚ್ಚಿಟ್ಟಿದ್ದಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಈಗ ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಒತ್ತಾಯಿಸಿದರು.

ಸಿಖ್ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ಗೆ ದೆಹಲಿ ಹೈಕೋರ್ಟ್ ಜೀವಾವಾಧಿ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ, ಸೋಮವಾರ ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ‘ಅಮ್ಮ, ಮಗ ಇಷ್ಟು ದಿನ ನ್ಯಾಯದ ಮೇಲೆ ಕೂತಿದ್ದರು. ಈಗ ರಾಹುಲ್ ತಮ್ಮ ಅಂತರಾತ್ಮದ ಕೈದಿಯಂತಾಗಿದ್ದಾರೆ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ರಫೇಲ್ ಯುದ್ಧ ವಿಮಾನ ಖರೀದಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳೆಲ್ಲಾ ರಾಜಕೀಯ ಪ್ರೇರಿತವಾಗಿದ್ದವು ಎಂಬುದು ಈಗ ನಿಚ್ಚಳವಾಗಿದೆ ಮತ್ತು ಕಾಂಗ್ರೆಸ್ ಮುಖಭಂಗ ಅನುಭವಿಸಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.