ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

7
ನಗರಸಭಾ ಟಿಕೆಟ್‌ ಕೈತಪ್ಪಿದ್ದಕ್ಕೆ ಅಸಮಾಧಾನ

ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Published:
Updated:
Deccan Herald

ಚಾಮರಾಜನಗರ: ನಗರಸಭಾ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಹಲವು ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. 

ಬಿಜೆಪಿಯ 20ಕ್ಕೂ ಹೆಚ್ಚು ಮುಖಂಡರು ಹಾಗೂ ಯುವ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಭಾನುವಾರ ಸೇರ್ಪಡೆಯಾಗಿದ್ದಾರೆ.

ಹಾಲಿ ನಗರಸಭಾ ಸದಸ್ಯ ಸಿ.ಜಿ. ಶ್ರೀಕಾಂತ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಚಾ.ಸಿ. ಗೋವಿಂದರಾಜು, ಬಿಜೆಪಿ ಮುಖಂಡರಾದ ವಿ. ಶ್ರೀನಿವಾಸಪ್ರಸಾದ್, ಪ್ರಕಾಶ್, ಕೋಮಲಕುಮಾರ್, ರವಿಕುಮಾರ್, ನಾಗರಾಜು, ಎನ್. ಮುರಳಿಧರ್, ರಾಜೇಂದ್ರ, ಎನ್. ಮಹೇಂದ್ರ, ದಿವಾಕರ್, ಸತೀಶ್, ಮಣಿಕಂಠ, ನಾಗರಾಜು, ನರಸಿಂಹ, ಸ್ವಾಮಿ, ಎನ್. ಕೃಷ್ಣ, ಲೋಕೇಶ್, ನರೇಂದ್ರ ರವಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ನಂತರ ಮಾತನಾಡಿದ ಸಚಿವರು, ‘ಜಿಲ್ಲಾ ಕೇಂದ್ರದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಇವರೆಲ್ಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಇನ್ನೂ ಅನೇಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಹಾಗಾಗಿ, ಈ ಬಾರಿ 20ಕ್ಕೂ ಹೆಚ್ಚು ವಾರ್ಡುಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಿ.ಮರಿಸ್ವಾಮಿ ಮಾತನಾಡಿ, ‘ಚಾಮರಾಜನಗರ ಹಾಗು ಕೊಳ್ಳೇಗಾಲ ನಗರಸಭೆಗಳಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಏರಲಿದೆ’ ಎಂದರು.

ಹಿರಿಯ ಕಾಂಗ್ರೆಸ್ ಮುಖಂಡ ಜಿಯಾವುಲ್ಲಾ ಷರೀಫ್‌, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜಯಣ್ಣ, ಜಿಲ್ಲಾ ಕಾರ್ಯದರ್ಶಿ ಪದ್ಮ ಪುರುಷೋತ್ತಮ್, ಕೆಪಿಸಿಸಿ ಸದಸ್ಯ ಸೈಯದ್ ರಫಿ, ಕಾರ್ಯದರ್ಶಿ ನಾಗಬಸವಣ್ಣ, ಮುಖಂಡರಾದ ಸುಹೇಲ್ ಆಲಿ ಖಾನ್, ಅಯೂಬ್ ಖಾಣ್, ಶಾಂತಲಾ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !