ಸಂತೋಷ್‌ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ

7

ಸಂತೋಷ್‌ ನೇತೃತ್ವದಲ್ಲಿ ಬಿಜೆಪಿ ಮುಖಂಡರ ಸಭೆ

Published:
Updated:
Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ನಡೆಸಬೇಕಾದ ಸಿದ್ಧತೆ ಕುರಿತಂತೆ ಬಿಜೆಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಬುಧವಾರ ನಗರದಲ್ಲಿ ಪಕ್ಷದ ಮುಖಂಡರ ಸಭೆ ನಡೆಸಿದರು.

ವರ್ತಕರ ಸಂಘದಲ್ಲಿ ನಡೆದ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಜನಪರ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನರಿಗೆ ತಿಳಿ ಹೇಳುವ ಕೆಲಸ ಆಗಬೇಕಿದೆ. ಮನೆ ಮನೆಗಳಿಗೆ ಭೇಟಿ ನೀಡಿ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸುವ ಕೆಲಸವನ್ನು ಕಾರ್ಯಕರ್ತರು ಹಾಗೂ ಮುಖಂಡರು ಮಾಡಬೇಕು’ ಎಂದು ಸೂಚಿಸಿದರು.

ವರಿಷ್ಠರ ನಿರ್ಧಾರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಪಕ್ಷದ ವರಿಷ್ಠರು ಮಾಡುತ್ತಾರೆ. ಯಾರೇ ಅಭ್ಯರ್ಥಿಯಾಗಿ ಆಯ್ಕೆಯಾದರೂ ಅವರ ಗೆಲುವಿಗೆ ಪಕ್ಷದ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದರು.

ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !