ಭಾನುವಾರ, ಸೆಪ್ಟೆಂಬರ್ 26, 2021
23 °C
ಬಿಜೆಪಿ ಕಾರ್ಯಕರ್ತರ ಪಕ್ಷ; ಪಕ್ಷವೇ ಹೀರೋ–ಮಾಜಿ ಸಚಿವ

ಟವೆಲ್‌ ಹಾಕಲು ಬಸ್‌ ಸೀಟಲ್ಲ: ಅಪ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ‘ಬಿಜೆಪಿ ಕಾರ್ಯಕರ್ತರ ಪಕ್ಷ. ಎತ್ತರ, ದಾಢಸಿ ಇದ್ದಾಕ್ಷಣ ನಾಯಕನಾಗಲ್ಲ. ಇಲ್ಲಿ ಪಕ್ಷವೇ ಹೀರೋ. ರಾಜ್ಯ ಘಟಕದ ಅಧ್ಯಕ್ಷರ ಸ್ಥಾನಕ್ಕೆ ಟವೆಲ್‌ ಹಾಕಲು ಅದೇನು ಬಸ್ಸು–ರೈಲಿನ ಸೀಟಲ್ಲ’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಯತ್ನಾಳ ಹೇಳಿಕೆಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

‘ವರಿಷ್ಠರು ಸಮರ್ಥರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುತ್ತಾರೆ. ಅರ್ಹತೆ ಇದ್ದವರು ಆಗ್ತಾರೆ. ನಾನು ಆಕಾಂಕ್ಷಿಯಲ್ಲ. ಆದರೆ ಎಲ್ಲ ಅರ್ಹತೆಗಳನ್ನು ಹೊಂದಿರುವೆ’ ಎಂದು ಸೋಮವಾರ ನಗರದಲ್ಲಿ ಪತ್ರಕರ್ತರಿಗೆ ಪ್ರತಿಕ್ರಿಯಿಸಿದರು.

‘ನಾನು ಪಕ್ಷ ನಿಷ್ಠ. ನನ್ನ ರಾಜಕಾರಣ ಏನಿದ್ದರೂ ಬಿಜೆಪಿಯಲ್ಲೇ. ಪಕ್ಷ ವಹಿಸುವ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಉತ್ತರ ಕರ್ನಾಟಕ–ದಕ್ಷಿಣ ಕರ್ನಾಟಕ ಎಂಬ ಭಾಗ ಬೇಡ. ಈ ಭಾಗದವರಿಗೆ ಅಧ್ಯಕ್ಷ ಸ್ಥಾನ ಸಿಗಲಿ ಎಂಬುದಕ್ಕೆ ನನ್ನದು ಸಹಮತವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯ ಘಟಕದ ಅಧ್ಯಕ್ಷರಲ್ಲ, ರಾಷ್ಟ್ರೀಯ ಘಟಕದ ಅಧ್ಯಕ್ಷರಾದರೂ ನಾನು ಬಿಜೆಪಿ ಬಿಡಲ್ಲ. ನನ್ನ ರಾಜಕಾರಣ ಬಿಜೆಪಿಯಲ್ಲೇ’ ಎಂದು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪುನರುಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.