ರಾಹುಲ್ ಕ್ಷಮೆಯಾಚನೆಗೆ ಒತ್ತಾಯ

7
ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಪ್ರತಿಭಟನೆ

ರಾಹುಲ್ ಕ್ಷಮೆಯಾಚನೆಗೆ ಒತ್ತಾಯ

Published:
Updated:
Deccan Herald

ಕಲಬುರ್ಗಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಅವರು ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ವಿಮಾನ ಖರೀದಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ. ಆ ಮೂಲಕ ದೇಶದ ಮಾನವನ್ನು ಹರಾಜು ಹಾಕುತ್ತಿದ್ದಾರೆ. ಯುದ್ಧ ವಿಮಾನ ಖರೀದಿಯಲ್ಲಿ ಎಲ್ಲವೂ ಪಾರದರ್ಶಕವಾಗಿದೆ. ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳಿಗಾಗಿ ನ್ಯಾಯಾಲಯದ ಮೊರೆ ಹೋಗಬಾರದು ಎಂದು ಸ್ವತಃ ಸುಪ್ರೀಂಕೋರ್ಟ್ ಹೇಳಿದೆ. ಇಷ್ಟಾದರೂ ರಾಹುಲ್ ಅವರು ಮನಬಂದಂತೆ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ, ಮುಖಂಡರಾದ ವಿದ್ಯಾಸಾಗರ ಕುಲಕರ್ಣಿ, ಸುಭಾಷ ರಾಠೋಡ, ಅಂಬಾರಾಯ ಅಷ್ಟಗಿ, ಚಂದ್ರಕಾಂತ ಪಾಟೀಲ, ಲಿಂಗರಾಜ ಬಿರಾದಾರ, ಚಂದಪ್ಪ ಹೇಮನೂರ, ಸಾವಿತ್ರಿ ಎಸ್.ಕುಳಗೇರಿ, ಮಲ್ಲಿನಾಥ ಪಾಟೀಲ, ನಾಮದೇವ ರಾಠೋಡ, ಶಿವಾನಂದ ಉಪ್ಪಿನ, ಶರಣಪ್ಪ ತಳವಾರ, ರಾಜೇಂದ್ರ ಕರೇಕಲ್, ಶರಣು ಸಲಗರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !