ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

7

ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

Published:
Updated:
Deccan Herald

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಸಂಬಂಧಿಸಿದಂತೆ ಅನ್ವರ್‌ ಮಾಣಿಪ್ಪಾಡಿ ವರದಿಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು, ಈ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

ಈ ಸಂಬಂಧ ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ ಮುಖಂಡರು ಗುರುವಾರ ಧರಣಿ ನಡೆಸಿದರು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಈ ವರದಿ ಬಹಿರಂಗವಾದರೆ, ಸಾಕಷ್ಟು ನಾಯಕರು ರಾಜಕೀಯ ಬಿಡಬೇಕಾಗುತ್ತದೆ. ಆದ್ದರಿಂದ ವರದಿಯನ್ನು ಸದನದಲ್ಲಿ ಮಂಡಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದರು.

‘ವರದಿಯನ್ನು ಮಂಡಿಸುವಂತೆ ಸಭಾಪತಿ, ರಾಜ್ಯಪಾಲರು ಮತ್ತು ಹೈಕೋರ್ಟ್‌ ಸೂಚನೆ ನೀಡಿದೆ. ಆದರೂ, ಸೂಚನೆಗಳಿಗೆ ಸರ್ಕಾರ ಬೆಲೆ ನೀಡಿಲ್ಲ. ಸಮ್ಮಿಶ್ರ ಸರ್ಕಾರ ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂಬುದು ನಮ್ಮ ಒತ್ತಾಯ’ ಎಂದು ಅವರು ಹೇಳಿದರು.

ಈ ವರದಿಯನ್ನು ಸದನದಲ್ಲಿ ಮಂಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದೂ ಶ್ರೀನಿವಾಸ್‌ ಪೂಜಾರಿ ತಿಳಿಸಿದರು.

ಶಾಸಕ ಆರ್‌.ಅಶೋಕ್‌ ಮಾತನಾಡಿ, ‘ಈ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಅಧಿಕಾರದಿಂದ ನಿರ್ಗಮಿಸುವ ಮೊದಲು ವರದಿಯನ್ನು ಮಂಡಿಸಲಿ. ವಕ್ಫ್‌ ಕಬಳಿಕೆ ಆಗಿಲ್ಲ ಎನ್ನುವುದಾದರೆ, ಮಾಣಿಪ್ಪಾಡಿ ವಿರುದ್ಧ ಕ್ರಮ ತೆಗೆದುಕೊಳ್ಳಿ. ಇಲ್ಲವಾದರೆ, ವರದಿ ಒಪ್ಪಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಿ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !