ಕಾಳಸಂತೆಯಲ್ಲಿ ರೈಲ್ವೆ ಟಿಕೆಟ್ ಮಾರಾಟ: ಆರು ಮಂದಿ ಸೆರೆ

ಮಂಗಳವಾರ, ಜೂನ್ 18, 2019
23 °C

ಕಾಳಸಂತೆಯಲ್ಲಿ ರೈಲ್ವೆ ಟಿಕೆಟ್ ಮಾರಾಟ: ಆರು ಮಂದಿ ಸೆರೆ

Published:
Updated:

ಬೆಂಗಳೂರು: ಮದುವೆ ಸಮಾರಂಭಗಳು ಹೆಚ್ಚು ಇದ್ದಾಗ ಮತ್ತು ಬೇಸಿಗೆ ರಜೆ ಕಾಲದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ರೈಲ್ವೆ ಟಿಕೆಟ್‌ ಮಾರಾಟಕ್ಕೆ ಕಾಳಸಂತೆ ಸೃಷ್ಟಿಸಿದ್ದ ಆರೋಪದಲ್ಲಿ ರಾಜ್ಯದ ವಿವಿಧೆಡೆ ಆರು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ದೇಶದಾದ್ಯಂತ ರೈಲ್ವೆ ಇಲಾಖೆ ಆರಂಭಿಸಿದ್ದ ‘ಆಪರೇಷನ್ ಥಂಡರ್‌’ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದಲ್ಲೂ ಕಾರ್ಯಾಚರಣೆ ನಡೆಸಿದ ರೈಲ್ವೆ ಅಧಿಕಾರಿಗಳು, ₹4.39 ಲಕ್ಷ ಮೌಲ್ಯದ ಟಿಕೆಟ್‌ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರಾಮಕೃಷ್ಣ ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್, ಮನು ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್, ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಅಂಬಿಕಾ ಎಲೆಕ್ಟ್ರಿಕಲ್ ಆ್ಯಂಡ್ ಹಾರ್ಡ್‌ವೇರ್ ಶಾಪ್, ಬೆಳಗಾವಿಯ ಮೀನಾಕ್ಷಿ ಹೈವೆ ಇಂಟರ್‌ನೆಟ್‌ನ ಮಾಲೀಕರನ್ನು ಬಂಧಿಸಲಾಗಿದೆ. ಕಂಪ್ಯೂಟರ್, ಮೊಬೈಲ್, ಇ–ಟಿಕೆಟ್‌ಗಳು ಮತ್ತು ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಶವಂತಪುರ ಮತ್ತು ಹಾವೇರಿ ನಿಲ್ದಾಣಗಳಲ್ಲಿನ ಖಾಸಗಿ ಕೌಂಟರ್‌ನ ಇಬ್ಬರನ್ನು ಬಂಧಿಸಲಾಗಿದೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !