ಕೆಪಿಸಿಸಿ ಅಧ್ಯಕ್ಷರ ಕ್ಷೇತ್ರದಲ್ಲೇ ಬಿಜೆಪಿಗೆ ಹೆಚ್ಚು ಮತ

ಭಾನುವಾರ, ಜೂನ್ 16, 2019
28 °C

ಕೆಪಿಸಿಸಿ ಅಧ್ಯಕ್ಷರ ಕ್ಷೇತ್ರದಲ್ಲೇ ಬಿಜೆಪಿಗೆ ಹೆಚ್ಚು ಮತ

Published:
Updated:
Prajavani

ಬೆಂಗಳೂರು: ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಅವರಿಗೆ ಗೆಲುವಿನ ಸಿಹಿ ಸಿಕ್ಕಿಲ್ಲ.

ಮಹದೇವಪುರ, ರಾಜಾಜಿನಗರ, ಸಿ.ವಿ.ರಾಮನ್‌ನಗರ, ಗಾಂಧಿನಗರದಲ್ಲಿನ ಮತಗಳು ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರ ಗೆಲುವಿಗೆ ಹೆಚ್ಚು ಕೊಡುಗೆ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಿಂತ 24,723 ಮತಗಳು ಬಿಜೆಪಿ ಬುಟ್ಟಿಗೆ ಬಿದ್ದಿವೆ. ಮೋಹನ್‌ ಅವರ ಗೆಲುವಿನ ಬಹುಪಾಲು ಮತಗಳು ಇದೇ ಕ್ಷೇತ್ರದಿಂದ ಬಂದಿರುವುದು ವಿಶೇಷ. 

ನಿರೀಕ್ಷೆಯಂತೆ ಬಿಜೆಪಿಯ ಎಸ್‌.ಸುರೇಶ್‌ ಕುಮಾರ್‌ ಪ್ರತಿನಿಧಿಸುವ ರಾಜಾಜಿನಗರ, ಎಸ್‌.ರಘು ಶಾಸಕರಾಗಿರುವ ಸಿ.ವಿ.ರಾಮನ್‌ ನಗರ, ಅರವಿಂದ ಲಿಂಬಾವಳಿ ಅವರ ಮಹದೇವಪುರದಲ್ಲಿನ ಮತಗಳು ಮೋಹನ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿವೆ.

ಕೆ.ಜೆ.ಜಾರ್ಜ್‌ ಅವರ ಸರ್ವಜ್ಞನಗರ ಕ್ಷೇತ್ರ, ಜಮೀರ್‌ ಅಹ್ಮದ್‌ ಖಾನ್‌ ಪ್ರತಿನಿಧಿಸುವ ಚಾಮರಾಜಪೇಟೆ, ಎನ್‌.ಎ.ಹ್ಯಾರಿಸ್‌ ಅವರ ಶಾಂತಿನಗರ ಕ್ಷೇತ್ರ ಹಾಗೂ ರೋಷನ್‌ ಬೇಗ್‌ ಪ್ರತಿನಿಧಿಸುವ ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮುನ್ನಡೆ ಸಿಕ್ಕಿದೆ.

ಪಕ್ಷದ ಶಾಸಕರು ಇರುವ ಕ್ಷೇತ್ರಗಳ ಸಾಂಪ್ರದಾಯಿಕ ಮತಗಳು, ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲಿಯೂ ಉತ್ತಮ ಮತ ಗಳಿಕೆಯಿಂದಾಗಿ ಮೋಹನ್‌ 70,968 ಮತಗಳಿಂದ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !