‘ಅರ್ಥಶಾಸ್ತ್ರದ ಬೆಳವಣಿಗೆಗೆ ಪುಸ್ತಕಗಳು ಅಗತ್ಯ’

ಸೋಮವಾರ, ಮೇ 20, 2019
30 °C

‘ಅರ್ಥಶಾಸ್ತ್ರದ ಬೆಳವಣಿಗೆಗೆ ಪುಸ್ತಕಗಳು ಅಗತ್ಯ’

Published:
Updated:
Prajavani

ವಿಜಯಪುರ: ‘ಭವಿಷ್ಯದಲ್ಲಿ ಅರ್ಥಶಾಸ್ತ್ರದ ಬೆಳವಣಿಗೆಗಾಗಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪುಸ್ತಕಗಳು ಅವಶ್ಯಕವಾಗಿವೆ’ ಎಂದು ಪ್ರಾಧ್ಯಾಪಕ ಡಾ.ಬಸವರಾಜು.ಎಂ ಹೇಳಿದರು.

ನಗರ ಹೊರ ವಲಯದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಮತ್ತು ಆರ್ಥಿಕ ಸಂವಾದ ಕಾರ್ಯಕ್ರಮದಲ್ಲಿ ಡಾ.ಸುರೇಶ ಕೆ.ಪಿ ರಚಿಸಿದ ‘ಸಿದ್ಧ ಉಡುಪು ಕಾರ್ಖಾನೆಗಳಲ್ಲಿನ ಮಹಿಳಾ ಮತ್ತು ಕಾರ್ಮಿಕರ ಭವಿಷ್ಯ’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕ ವ್ಯವಸ್ಥೆ ಕುರಿತ ವಿಶ್ಲೇಷಣೆ, ಕಾರ್ಮಿಕರ ಸ್ಥಿತಿಗತಿ ಹಾಗೂ ಕಾರ್ಖಾನೆಗಳಲ್ಲಿ ಮಹಿಳೆಯರು ಆಂತರಿಕ ಮತ್ತು ಬಾಹ್ಯವಾಗಿ ಎದುರಿಸುವ ಸಮಸ್ಯೆಗಳನ್ನು ತಿಳಿಯಲು, ಸಿದ್ಧ ಉಡುಪು ಕಾರ್ಖಾನೆಗಳಲ್ಲಿನ ಮಹಿಳಾ ಮತ್ತು ಕಾರ್ಮಿಕರ ಭವಿಷ್ಯ ಪುಸ್ತಕ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ’ ಎಂದರು.

‘ಈ ಪುಸ್ತಕವು ಕಾರ್ಖಾನೆ ಮತ್ತು ಮಹಿಳೆಯರಿಗೆ ಸಂಬಂಧಿಸಿದ್ದಾಗಿದ್ದು, ಲೇಖಕರು ಪುಸ್ತಕವನ್ನು ಏಳು ಅಧ್ಯಾಯಗಳಲ್ಲಿ ವಿವರಿಸಿದ್ದಾರೆ. ಸಾಕಷ್ಟು ಪ್ರಮಾಣದಲ್ಲಿ ಮಹಿಳಾ ಕಾರ್ಮಿಕರು ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಉದ್ಯೋಗ ಭದ್ರತೆಯ ಕೊರತೆ, ಕಾರ್ಖಾನೆಗಳ ಕಾನೂನು ನಿಯಮಗಳ ಬಗ್ಗೆ ಅರಿವಿಲ್ಲದರಿಂದ ತಮ್ಮ ಹಕ್ಕುಗಳನ್ನು ಪಡೆಯುವಲ್ಲಿ ಹಿಂದೆ ಉಳಿಯುತ್ತಿದ್ದಾರೆ’ ಎಂದು ಹೇಳಿದರು.

ಆರ್ಥಿಕ ವಿಶ್ಲೇಷಕ ಡಾ.ಎಚ್.ಆರ್.ಕೃಷ್ಣಯ್ಯಗೌಡ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಆರ್.ವಿ.ಗಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಇದ್ದರು. ಮಧು ಸ್ವಾಗತ ಗೀತೆ ಹಾಡಿದರು. ಶಿಲ್ಪಾ ನಿರೂಪಿಸಿದರು. ಕೀರ್ತಿ ಎಚ್ ವಂದಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !