ಎಲ್ಲ ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ: ಅರಕಲವಾಡಿ ನಾಗೇಂದ್ರ

ಸೋಮವಾರ, ಮೇ 27, 2019
21 °C
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ

ಎಲ್ಲ ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ: ಅರಕಲವಾಡಿ ನಾಗೇಂದ್ರ

Published:
Updated:
Prajavani

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಇಲ್ಲಿ ಶುಕ್ರವಾರ ಹೇಳಿದರು.

‘ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ರಾಜ್ಯ ಹಾಗೂ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರು ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಾಮರಾಜನಗರ ಕ್ಷೇತ್ರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲೂ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆ ಎದುರಿಸಲು ಸಿದ್ಧರಾಗುತ್ತಿದ್ದೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಎಸ್‌ಪಿ 3ನೇ ದೊಡ್ಡ ರಾಷ್ಟ್ರೀಯ ಪಕ್ಷ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.

ಅಭ್ಯರ್ಥಿ ಘೋಷಣೆ: ಮೈಸೂರು ವಲಯದ 9 ಜಿಲ್ಲೆಗಳಲ್ಲೂ ಸನ್ನದ್ಧರಾಗಿದ್ದೇವೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ವಕೀಲರಾದ ಸಿ.ಎಸ್‌.ದ್ವಾರಕಾನಾಥ್‌ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಉಳಿದಂತೆ ಚಾಮರಾಜನಗರ, ಮೈಸೂರು ಹಾಗೂ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ ಆಯ್ಕೆ ಮಾಡಿಲ್ಲ ಎಂದರು.

‘ಮೈತ್ರಿ, ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ಬಿಟ್ಟದ್ದು’
‘ಲೋಕಸಭಾ ಚುನಾವಣೆಗೆ ಇದುವರೆಗೆ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ. ಮುಂದೆ  ಹೊಂದಾಣಿಕೆ ಮಾಡಲಾಗುತ್ತದೆಯೇ, ಇಲ್ಲವೇ ಎಂಬ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಅರಕಲವಾಡಿ ನಾಗೇಂದ್ರ ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !