ಜಿಲ್ಲೆಗೆ ದೊಡ್ಡ ಕೊಡುಗೆ ನೀಡದ ಬಜೆಟ್‌

7
ಕುಮಾರಸ್ವಾಮಿ ಬಜೆಟ್‌,

ಜಿಲ್ಲೆಗೆ ದೊಡ್ಡ ಕೊಡುಗೆ ನೀಡದ ಬಜೆಟ್‌

Published:
Updated:
ಚಾಮರಾಜನಗರ ವೈದ್ಯಕೀಯ ಕಾಲೇಜಿನ ನೋಟ

ಚಾಮರಾಜನಗರ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಹೆಚ್ಚು ಕೊಡುಗೆಗಳಿಲ್ಲ.

ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ₹50 ಕೋಟಿಯಷ್ಟು ಅನುದಾನದ ಹಂಚಿಕೆಯ ಪ್ರಸ್ತಾಪ ಬಿಟ್ಟರೆ ಇಡೀ ಬಜೆಟ್‌ನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ದೊಡ್ಡಮಟ್ಟಿನ ಬೇರೆ ಘೋಷಣೆಗಳಿಲ್ಲ. ಪ್ರಸ್ತಾವಿತ ಆಸ್ಪತ್ರೆಯ ಬಗ್ಗೆ ಸಿದ್ದರಾಮಯ್ಯ ಅವರು ಹಿಂದಿನ ಬಜೆಟ್‌ನಲ್ಲಿ ₹100 ಕೋಟಿ ಹಂಚಿಕೆ ಮಾಡುವ ಬಗ್ಗೆ ಘೋಷಣೆ ಮಾಡಿದ್ದರು. ₹90 ಕೋಟಿ ತಕ್ಷಣ ಬಿಡುಗಡೆ ಮಾಡಲೂ ಅನುಮತಿ ನೀಡಿದ್ದರು. ಅಂದು ಜಿಲ್ಲಾ ಉಸ್ತುವಾರಿ ಸಚಿವೆಯಾಗಿದ್ದ ಎಂ.ಸಿ. ಮೋಹನಕುಮಾರಿ ಅವರು ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿದ್ದರು.

ಗುರುವಾರ ಮಂಡಿಸಲಾದ ಹೊಸ ಬಜೆಟ್‌ನಲ್ಲಿ ಗದಗ, ಕೊಪ್ಪಳ, ಚಾಮರಾಜನಗರ ಮತ್ತು  ಹಾಸನಗಳಲ್ಲಿರುವ ವೈದ್ಯಕೀಯ ಕಾಲೇಜುಗಳಲ್ಲಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ₹200 ಕೋಟಿ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಹಾಗಾಗಿ, ಜಿಲ್ಲೆಗೆ ₹50 ಕೋಟಿ ಸಿಗಬಹುದು ಎಂಬ ನಿರೀಕ್ಷೆ ಇದೆ.

ವಾಯು ಗುಣಮಟ್ಟ ಅಳೆಯುವ ಕೇಂದ್ರ: ಹೆಚ್ಚುತ್ತಿರುವ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ  ₹96 ಕೋಟಿ ವೆಚ್ಚದಲ್ಲಿ 42 ವಾಯುಗುಣಮಟ್ಟ ಮಾಪನ ಕೇಂದ್ರಗಳನ್ನು ಸ್ತಾಪಿಸುವ ಪ್ರಸ್ತಾವವೂ ಬಜೆಟ್‌ನಲ್ಲಿ ಇದೆ. ಹಾಗಾಗಿ, ಜಿಲ್ಲೆಯಲ್ಲೂ ಕನಿಷ್ಠ ಒಂದು ವಾಯುಗುಣಮಟ್ಟ ಮಾಪನ ಕೇಂದ್ರ ಸ್ಥಾಪನೆಯಾಗುವುದು ಖಚಿತ.

ಪ್ರಸ್ತುತ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿರುವ ವೃದ್ಧಾಶ್ರಮಗಳನ್ನು ಉಪವಿಭಾಗಗಳಿಗೂ ವಿಸ್ತರಿಸಲಿರುವುದರಿಂದ, ಜಿಲ್ಲೆಯಲ್ಲಿ ಇನ್ನೊಂದು ವೃದ್ಧಾಶ್ರಮ ನಿರ್ಮಾಣವಾಗುವುದನ್ನು ನಿರೀಕ್ಷಿಸಬಹುದಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !