ಬಸ್ ಪ್ರಯಾಣ ದರ ಹೆಚ್ಚಿಸಿದರೆ ಹೋರಾಟ: ಕೋಟ

7

ಬಸ್ ಪ್ರಯಾಣ ದರ ಹೆಚ್ಚಿಸಿದರೆ ಹೋರಾಟ: ಕೋಟ

Published:
Updated:

ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇ 18ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಹೆಚ್ಚಳ ಆಗಿರುವ ಕಾರಣದಿಂದ ಮತ್ತು ಜಾಗತಿಕ ಮಟ್ಟದ ಆರ್ಥಿಕ ಸ್ಥಿತಿಗತಿಗೆ ಅನುಗುಣವಾಗಿ ರೂಪಾಯಿ ಮೌಲ್ಯ ಡಾಲರ್ ಎದುರು ಕುಸಿದಿರುವುದರಿಂದ ಇಂಧನ ದರದಲ್ಲಿ ಏರಿಕೆ ಉಂಟಾಗುತ್ತಿದೆ. ಈ ಸತ್ಯ ಮರೆಮಾಚಿ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಭಾರತ್ ಬಂದ್‌ಗೆ ಕರೆ ನೀಡಿದೆ’ ಎಂದು ದೂರಿದರು.

‘ಜನರ ಮೇಲೆ ಹೊರೆಯಾಗುವಂತೆ ಇಂಧನದ ಮೇಲೆ ಸೆಸ್ ವಿಧಿಸಿಯೂ ಬಸ್ ದರ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ದ್ವಿಮುಖ ನೀತಿ ವಿರೋಧಿಸಿ ಹೋರಾಟ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !