ಕೆಸರುಗದ್ದೆಯಂತಾದ ತಾತ್ಕಾಲಿಕ ಬಸ್ ನಿಲ್ದಾಣ

7

ಕೆಸರುಗದ್ದೆಯಂತಾದ ತಾತ್ಕಾಲಿಕ ಬಸ್ ನಿಲ್ದಾಣ

Published:
Updated:
Deccan Herald

ಕೊಳ್ಳೇಗಾಲ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹಗೊಂಡಿದ್ದು, ಕೆಸರುಗದ್ದೆಯಂತೆ ಪರಿವರ್ತನೆ ಆಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

ಮಹದೇಶ್ವರ ಬೆಟ್ಟಕ್ಕೆ ಹೋಗಬೇಕಾದರೆ ಈ ನಿಲ್ದಾಣಕ್ಕೆ ಬರಬೇಕು. ಬೆಟ್ಟದಲ್ಲಿ ಆಗಾಗ್ಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುವುದರಿಂದ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ, ಕನಕಪುರ, ಮಂಡ್ಯ, ರಾಮನಗರ, ಬೆಂಗಳೂರು ಕಡೆಯಿಂದ ಸಾವಿರಾರು ಮಂದಿ ಬಂದಿದ್ದರು. ಆದರೆ, ಬಸ್‌ ನಿಲ್ದಾಣವು ಕೆಸರುಗದ್ದೆ ಯಂತಾಗಿದ್ದರಿಂದ ಭಕ್ತರು ತೊಂದರೆ ಅನುಭವಿಸಿದರು.

ಈ ನಿಲ್ದಾಣದಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು ವ್ಯವಸ್ಥೆ ಮಾಡಿಲ್ಲ. ಶೌಚಾಲಯಗಳು ಸಮರ್ಪಕವಾಗಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ನಗರದೊಳಗಿರುವ ಬಸ್‌ ನಿಲ್ದಾಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೂ ಈ ನಿಲ್ದಾಣದಲ್ಲಿ ಕುಡಿಯುವ ನೀರು, ಆಸನಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಬೇಕು ಎಂದು
ಕನಕಪುರದ ಸುರೇಂದ್ರ ಅವರು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !