ಬುಧವಾರ, ಏಪ್ರಿಲ್ 21, 2021
30 °C

ಬ್ಯಾಂಕ್ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ತರುವುದು ಮತ್ತು  ಖಂಡೇಲ್‌ವಾಲ್ ಸಮಿತಿ ಶಿಫಾರಸು  ಜಾರಿ  ವಿರೋಧಿಸಿ ಆಗಸ್ಟ್ 22 ಮತ್ತು 23ರಂದು ಎರಡು ದಿನಗಳ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ನೌಕರರು ದೇಶವ್ಯಾಪಿ ಮುಷ್ಕರ ನಡೆಸಲಿದ್ದಾರೆ.ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಖಾಸಗಿ ಬ್ಯಾಂಕುಗಳು ಮತ್ತು `ಎಟಿಎಂ~ ಘಟಕಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಷ್ಕರದಿಂದ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗಲಿದೆ ಎಂದು ಭಾರತೀಯ ಬ್ಯಾಂಕುಗಳ ಒಕ್ಕೂಟ (ಐಬಿಎ) ಹೇಳಿದೆ.ಮುಖ್ಯ ಕಾರ್ಮಿಕ ಆಯುಕ್ತರ ಜತೆ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ನಡೆಸಿದ ಮಾತುಕತೆ ವಿಫಲವಾಗಿರುವುದರಿಂದ ಮುಷ್ಕರಕ್ಕೆ ಇಳಿಯುವುದು ಅನಿವಾರ್ಯವಾಯಿತು ಎಂದು ವೇದಿಕೆ ಪದಾಧಿಕಾರಿಗಳು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.