ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ವಿದೇಶಿ ಹೂಡಿಕೆ ಮಿತಿ ಏರಿಕೆ ಜುಲೈನಲ್ಲಿ'

Last Updated 25 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಕ್ಷಣೆ ಸೇರಿದಂತೆ ವಿವಿಧ ವಲಯಗಳಲ್ಲಿ ಈಗಿರುವ ಶೇ 26ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಮಿತಿಯನ್ನು ಶೇ 49ಕ್ಕೆ ಹೆಚ್ಚಿಸಬೇಕು ಎನ್ನುವ ಪ್ರಸ್ತಾವವನ್ನು ಕೇಂದ್ರ ಸಚಿವ ಸಂಪುಟ ಜುಲೈ ಮೂರನೇ ವಾರದಲ್ಲಿ ಪರಿಶೀಲಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

ಭಾರತವನ್ನು ಜಾಗತಿಕ ಹೂಡಿಕೆ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ `ಎಫ್‌ಡಿಐ' ನೀತಿಯಲ್ಲಿ ಈಗಾಗಲೇ ಅಗತ್ಯ ಬದಲಾವಣೆ ತರಲಾಗಿದೆ. ಬಹುಬಗೆ ಬ್ರ್ಯಾಂಡ್, ಚಿಲ್ಲರೆ ಮತ್ತು ದೂರವಾಣಿ ಕ್ಷೇತ್ರಗಳಲ್ಲಿ ಹೆಚ್ಚಿನ ವಿದೇಶಿ ಹೂಡಿಕೆ ಆಕರ್ಷಿಸಲು `ಎಫ್‌ಡಿಐ' ಮಿತಿ ಹೆಚ್ಚಿಸುವ ಪ್ರಸ್ತಾವ ಪರಿಶೀಲಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ವಾಣಿಜ್ಯ ವ್ಯವಹಾರಗಳ ಖಾತೆ ಕಾರ್ಯದರ್ಶಿ ಅರವಿಂದ್ ಮಯರಾಂ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT