ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ₹3,647 ಕೋಟಿ: ಬಂಡವಾಳ ಹೂಡಿಕೆಗಾಗಿ ಕೇಂದ್ರದಿಂದ ವಿಶೇಷ ನೆರವು

Published 26 ಜೂನ್ 2023, 15:40 IST
Last Updated 26 ಜೂನ್ 2023, 15:40 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡಲು ಕೇಂದ್ರದ ಹಣಕಾಸು ಇಲಾಖೆಯು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023–24ರ ಯೋಜನೆಯಡಿ 16 ರಾಜ್ಯಗಳಿಗೆ ₹56,415 ಕೋಟಿ ಬಿಡುಗಡೆ ಮಾಡಲು ಸೋಮವಾರ ಒಪ್ಪಿಗೆ ನೀಡಿದೆ.

ಈ ಯೋಜನೆಯಡಿ ಕರ್ನಾಟಕಕ್ಕೆ ₹3,647 ಕೋಟಿ ಬಿಡುಗಡೆಗೊಳಿಸಲು ಅನುಮೋದನೆ ನೀಡಲಾಗಿದೆ.  

ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಹಣಕಾಸಿನ ನೆರವು ನೀಡುವ ಈ ಯೋಜನೆಯನ್ನು ಹಣಕಾಸು ಸಚಿವಾಲಯವು 2020–21ರಲ್ಲಿ ಆರಂಭಿಸಿತು. ಕೋವಿಡ್‌–19 ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಲಾಯಿತು. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ, ಸೇತುವೆಗಳು, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಈ ಮೊತ್ತವನ್ನು ನಿಗದಿಪಡಿಸಲಾಗಿದೆ.

ಈ ಯೋಜನೆಯಡಿ ಈ ವರ್ಷ ರಾಜ್ಯಗಳಿಗೆ ₹1.3 ಲಕ್ಷ ಕೋಟಿ ನೀಡುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ಈ ಮೊತ್ತ ನೀಡಲಾಗುತ್ತದೆ. 

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಕೇಂದ್ರ ತೆರಿಗೆಗಳು ಮತ್ತು ಸುಂಕಗಳ ಪಾಲಿನ ಅನುಪಾತದಲ್ಲಿ ರಾಜ್ಯಗಳ ನಡುವೆ ಮೊತ್ತ ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT