ಶುಕ್ರವಾರ, ಡಿಸೆಂಬರ್ 13, 2019
20 °C

ಅಶೋಕ್‌ ಲೇಲ್ಯಾಂಡ್‌: ₹ 1 ಸಾವಿರ ಕೋಟಿ ಬಂಡವಾಳ ಹೂಡಿಕೆ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

ಅಶೋಕ್‌ ಲೇಲ್ಯಾಂಡ್‌: ₹ 1 ಸಾವಿರ ಕೋಟಿ ಬಂಡವಾಳ ಹೂಡಿಕೆ ನಿರ್ಧಾರ

ಚೆನ್ನೈ: ಪ್ರಸಕ್ತ ಹಣಕಾಸು ವರ್ಷದಲ್ಲಿ ವಹಿವಾಟು ವಿಸ್ತರಣೆ ಉದ್ದೇಶಕ್ಕೆ ₹ 1 ಸಾವಿರ ಕೋಟಿಗಳಷ್ಟು ಬಂಡವಾಳ ತೊಡಗಿಸಲು ಹಿಂದೂಜಾ ಗ್ರೂಪ್‌ನ ಅಶೋಕ್‌ ಲೇಲ್ಯಾಂಡ್‌ ಉದ್ದೇಶಿಸಿದೆ.

‘ಆಂಧ್ರಪ್ರದೇಶದಲ್ಲಿ ಬಸ್‌, ಟ್ರಕ್‌ ಮತ್ತು ವಿದ್ಯುತ್‌ ಚಾಲಿತ ವಾಹನ ತಯಾರಿಕೆಯ ಹೊಸ ಕಾರ್ಖಾನೆ ಆರಂಭಿಸಲಾಗುವುದು. ಈ ಯೋಜನೆಗೆ ₹ 200 ಕೋಟಿಗಳಷ್ಟು ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದು ಅಶೋಕ್ ಲೇಲ್ಯಾಂಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನೋದ್‌ ಕೆ. ದಾಸರಿ ಅವರು ಹೇಳಿದ್ದಾರೆ.

ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾಗತಿಕ ವಾಹನ ಸಮ್ಮೇಳನದಲ್ಲಿ ಸಂಸ್ಥೆಯ ವಿವಿಧ ವಾಹನಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ವಿದ್ಯುತ್‌ ಚಾಲಿತ ವಾಹನಗಳ ತಯಾರಿಕೆ ಉದ್ದೇಶಕ್ಕೆ ₹ 100 ಕೋಟಿ ಮೀಸಲು ಇಡಲಾಗಿದೆ ಎಂದರು.

ಪ್ರತಿಕ್ರಿಯಿಸಿ (+)