ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಲಬಾರ್‌’ಗೆ ಆಲಿಯಾ ಭಟ್ ರಾಯಭಾರಿ

Last Updated 18 ಏಪ್ರಿಲ್ 2023, 15:28 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್ ನಟಿ ಆಲಿಯಾ ಭಟ್ ಅವರು ಮಲಬಾರ್ ಗೋಲ್ಡ್‌ ಆ್ಯಂಡ್ ಡೈಮಂಡ್ಸ್‌ ಕಂಪನಿಯ ಬ್ರ್ಯಾಂಡ್ ರಾಯಭಾರಿ ಆಗಲು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.

ಚಿನ್ನಾಭರಣ ಮಾರಾಟ ಕಂಪನಿಗಳ ಪೈಕಿ ಮಲಬಾರ್ ಗೋಲ್ಡ್‌ ಆ್ಯಂಡ್ ಡೈಮಂಡ್ಸ್‌, ಜಾಗತಿಕವಾಗಿ ಆರನೆಯ ಅತಿದೊಡ್ಡ ಕಂಪನಿ. ಹತ್ತು ದೇಶಗಳಲ್ಲಿ ಇದು ಜಾಲವನ್ನು ಹೊಂದಿದೆ. ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಬಾಂಗ್ಲಾದೇಶ, ಟರ್ಕಿ ಮತ್ತು ನ್ಯೂಜಿಲೆಂಡ್‌ನಲ್ಲಿ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಲು ಕಂಪನಿ ಉದ್ದೇಶಿಸಿದೆ. ಈ ಸಂದರ್ಭದಲ್ಲಿ ಆಲಿಯಾ ಅವರು ಬ್ರ್ಯಾಂಡ್ ರಾಯಭಾರಿ ಆಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ಜಾಗತಿಕ ಬ್ರ್ಯಾಂಡ್‌ನ ರಾಯಭಾರಿ ಆಗುತ್ತಿರುವುದು ಖುಷಿ ತಂದಿದೆ’ ಎಂದು ಆಲಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT