ಶನಿವಾರ, ಏಪ್ರಿಲ್ 1, 2023
23 °C

ಬಿಇಎಲ್‌ ವಹಿವಾಟು ಶೇ 24ರಷ್ಟು ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ (ಬಿಇಎಲ್‌) 2022–23ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹11,005 ಕೋಟಿ ಮೊತ್ತದ ವಹಿವಾಟು ನಡೆಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹8,843 ಕೋಟಿ ಮೊತ್ತದ ವಹಿವಾಟು ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ವಹಿವಾಟು ಮೊತ್ತವು ಶೇ 24ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

ತೆರಿಗೆ ನಂತರದ ಲಾಭವು (ಪಿಎಟಿ) ₹583 ಕೋಟಿಯಿಂದ ₹598 ಕೋಟಿಗೆ ಏರಿಕೆ ಆಗಿದೆ. ₹1ರ ಮುಖಬೆಲೆಯ ಪ್ರತಿ ಷೇರಿಗೆ ₹0.60 ಮಧ್ಯಂತರ ಲಾಭಾಂಶ ನೀಡಲು ಕಂಪನಿಯ ಆಡಳಿತ ಮಂಡಳಿ ನಿರ್ದೇಶಕರು ಶಿಫಾರಸು ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು