ನವದೆಹಲಿ: ರೋಗಿಗಳ ಮೇಲಿನ ಆರ್ಥಿಕ ಹೊರೆಯನ್ನು ನಿವಾರಿಸುವ ನಿಟ್ಟಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. 2025-26ರ ಕೇಂದ್ರ ಬಜೆಟ್ನಲ್ಲಿ 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಈ ಉಪಕ್ರಮವು ಅಗತ್ಯ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
.Union Budget 2025: ಯಾವುದು ಇಳಿಕೆ, ಯಾವುದು ಏರಿಕೆ?.
ಈ 36 ಔಷಧಿಗಳ ಮೇಲೆ ಪ್ರಸ್ತಾವಿತ ಶೇ 5 ರಿಯಾಯಿತಿ ಸುಂಕವನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳ ತಯಾರಿಕೆಗೆ ಕಸ್ಟಮ್ಸ್ ಸುಂಕಗಳಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

2024ರ ಫೆಬ್ರುವರಿಯಲ್ಲಿ, ಸರ್ಕಾರವು ಮೂರು ಪ್ರಮುಖ ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು ಕಡಿತಗೊಳಿಸಿತ್ತು.

ಈ ಕ್ರಮವು ಉದ್ದೇಶಿತ ಚಿಕಿತ್ಸಾ ಔಷಧಗಳು ಮತ್ತು ರೇಡಿಯೊಥೆರಪಿ ಯಂತ್ರಗಳು ಹಾಗೂ ರೊಬೊಟಿಕ್ಸ್ನಂತಹ ಸುಧಾರಿತ ಕ್ಯಾನ್ಸರ್ ಚಿಕಿತ್ಸಾ ಸಾಧನಗಳಿಗೆ ವಿಸ್ತರಿಸಬೇಕು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನವು ಶೇ 37ರಷ್ಟು ಕಸ್ಟಮ್ಸ್ ಸುಂಕವನ್ನು ಹೊಂದಿವೆ.
.Union Budget 2025: ಕೇಂದ್ರ ಬಜೆಟ್ ನೇರ ಪ್ರಸಾರ ಇಲ್ಲಿ ವೀಕ್ಷಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.