ಸೋಮವಾರ, ಏಪ್ರಿಲ್ 6, 2020
19 °C
ಅನುಭವ ಮಂಟಪಕ್ಕೆ ಅನುದಾನ

ಐತಿಹಾಸಿಕ ನಿರ್ಣಯ: ಶಾಸಕ ಬಿ. ನಾರಾಯಣರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ₹500 ಕೋಟಿ ಅನುದಾನ ಪ್ರಕಟಿಸಿರುವುದು ಐತಿಹಾಸಿಕ ನಿರ್ಣಯವಾಗಿದೆ ಎಂದು ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಪ್ರತಿಕ್ರಿಯಿಸಿದ್ದಾರೆ.

ಬಸವಾದಿ ಶರಣರು 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ನೀಡಿದ್ದರು. ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪರಿಚಯಿಸಿದ್ದರು ಎಂದು ತಿಳಿಸಿದ್ದಾರೆ.

ನೂತನ ಅನುಭವ ಮಂಟಪ ನಿರ್ಮಿಸಬೇಕು ಎಂಬುದು ಜನರ ಬಹುದಿನಗಳ ಬೇಡಿಕೆಯಾಗಿತ್ತು. ಜನರ ಬೇಡಿಕೆಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ₹500 ಕೋಟಿ ಅನುದಾನ ಮೀಸಲಿರಿಸಿ, ₹100 ಕೋಟಿ ತಕ್ಷಣ ಬಿಡುಗಡೆ ಮಾಡುವುದಾಗಿ ತಿಳಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಹೇಳಿದ್ದಾರೆ.

ನೂತನ ಅನುಭವ ಮಂಟಪ ನಿರ್ಮಾಣದ ನಂತರ ಬಸವಕಲ್ಯಾಣ ಇಡೀ ವಿಶ್ವದ ಗಮನ ಸೆಳೆಯಲಿದೆ. ವಿಶ್ವದ ಎಲ್ಲೆಡೆಯಿಂದ ಜನ ಬಸವಕಲ್ಯಾಣಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗೆ ಅಭಿನಂದನೆ: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ₹500 ಕೋಟಿ ಅನುದಾನ ಘೋಷಿಸಿದ ಪ್ರಯುಕ್ತ ಶಾಸಕ ಬಿ. ನಾರಾಯಣರಾವ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು