ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget: ತವರು ಜಿಲ್ಲೆ ಹಾವೇರಿಗೆ ಬಜೆಟ್‌ನಲ್ಲಿ ಸಿಎಂ ಕೊಟ್ಟಿದ್ದೇನು?

Last Updated 4 ಮಾರ್ಚ್ 2022, 13:52 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ತವರು ಜಿಲ್ಲೆ ಹಾವೇರಿಗೆ ಭರ್ಜರಿ ಅನುದಾನಗಳ ಕೊಡುಗೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ ಹೀಗೆ ಹಲವು ವಲಯಗಳಿಗೆ ಪ್ರೋತ್ಸಾಹ ನೀಡಿದ್ದಾರೆ.

ತವರಿಗೆ ಸಿಎಂ ಕೊಡುಗೆ

* ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆ.

* ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ

* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ.

* ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಹಾವೇರಿ, ಬೀದರ್, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಎಂಬ ಹೊಸ ಯೋಜನೆ.

*ಶಿಗ್ಗಾಂವಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ₹ 20 ಕೋಟಿ ಅನುದಾನ.

* ಹಾವೇರಿ, ಹಾಸನ, ಕೊಪ್ಪಳ, ಚಾಮರಾಜನಗರ, ಬೀದರ್, ಹಾವೇರಿ, ಕೊಡಗು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿಶ್ವವಿದ್ಯಾಲಯಗಳ ಸ್ಥಾಪನೆ.

* ಹಾವೇರಿ ಜಿಲ್ಲೆ ಸವಣೂರು ತಾಲೂಕಿನಲ್ಲಿ ಒಂದು ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.

* ಚರ್ಮ ಕುಶಲ ಕರ್ಮಿಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಹಾವೇರಿ ಮತ್ತು ಬಾಗಲಕೋಟೆಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ನಿರ್ಮಾಣ.

* ರಾಣೆ ಬೆನ್ನೂರಿನಲ್ಲಿ ನೂತನ ಜವಳಿ ಪಾರ್ಕ್

* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ ₹ 28 ಕೋಟಿ ಅನುದಾನ.

* ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರಿಗೆ ಹೊಸ ರೈಲು ಮಾರ್ಗ

ಇವನ್ನೂ ಓದಿ:

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT