ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget | ಆರ್ಥಿಕ ನೆರವು; ‘ಅಸ್ಮಿತೆ’ಯ ಬಲ

ಮಹಿಳಾ ಸಬಲೀಕರಣ, ಮಕ್ಕಳ ಕಲ್ಯಾಣ ಆಶಯ
Last Updated 4 ಮಾರ್ಚ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕುಟುಂಬ ಪಾಲಿಸುವ, ಸಮಾಜ ಕಟ್ಟುವ ಮಹಿಳಾ ಸಮುದಾಯವನ್ನು ಸೆಳೆದು, ಒಲವು ಗಳಿಸಲು ಮುಖ್ಯಮಂತ್ರಿ ಕಸರತ್ತು ನಡೆಸಿರುವುದು ಬಜೆಟ್‌ನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ದೊಡ್ಡ ವರ್ಗವನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲೀಕರಿಸಿ, ಸ್ವಾವಲಂಬಿಗಳಾಗಿಸುವ ಆಶಯ, ಲೆಕ್ಕಾಚಾರದಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ ಅನುದಾನ ಒದಗಿಸಲಾಗಿದೆ.

ಪರಸ್ಪರ ಸಹಕಾರದ ಹಸ್ತ ಚಾಚುತ್ತ, ಒಬ್ಬರ ಬಾಳಿಗೆ ಇನ್ನೊಬ್ಬರು ನೆರವಾಗುವ ಸ್ವ ಸಹಾಯ ಸಂಘಗಳಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸುವ ಪ್ರಸ್ತಾವ ಬಜೆಟ್‌ನಲ್ಲಿದೆ. ಈ ಹಿಂದಿನ ಸಾಲಿನಲ್ಲಿ ಬಿ.ಎಸ್‌. ಯಡಿಯೂರಪ್ಪ ಮಂಡಿಸಿದ್ದ ಬಜೆಟ್‌ನಲ್ಲಿಯೂ ಮಹಿಳಾಪರ ಒಲವು ಇತ್ತು. ಅದೇ ಹಾದಿ ತುಳಿದಿರುವ ಬೊಮ್ಮಾಯಿ, ಈ ಬಾರಿ ಆರ್ಥಿಕ ನೆರವಿನ ಹಸ್ತವನ್ನು ಇನ್ನಷ್ಟು ಚಾಚಿದ್ದಾರೆ.

ಮಹಿಳಾ ಸ್ವಸಹಾಯ ಸಂಘಗಳು ವಿಪರೀತವಾದ ದಾಖಲೆಗಳನ್ನು ಸಂಗ್ರಹಿಸಿ, ಸಾಲಕ್ಕಾಗಿ ಬ್ಯಾಂಕುಗಳಿಗೆ ಅಲೆಯುವ ಪ್ರಕ್ರಿಯೆಯಿಂದ ಮುಕ್ತಗೊಳಿಸುವ ದೂರದೃಷ್ಟಿ ಬಜೆಟ್‌ನಲ್ಲಿದೆ. ಅಂದರೆ, ಈ ಸಂಘಗಳು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಪಡೆಯುವುದು ಕಷ್ಟಸಾಧ್ಯ. ಅದನ್ನು ಮನಗಂಡಿರುವ ಬೊಮ್ಮಾಯಿ‌, ಸಾರ್ವಜನಿಕ ವಲಯದ ಬ್ಯಾಂಕುಗಳ ಸಹಯೋಗದೊಂದಿಗೆರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮೂಲಕ ಏಕಗವಾಕ್ಷಿ ಸಾಲ ಸೌಲಭ್ಯ ಒದಗಿಸುವ ಮಾತು ನೀಡಿದೆ. ಅಷ್ಟೇ ಅಲ್ಲ, ಈ ಉದ್ದೇಶಕ್ಕೆಂದೇ ಸಾರ್ವಜನಿಕ ವಲಯದ ಒಂದು ಬ್ಯಾಂಕೊಂದನ್ನು ಆಧಾರ್‌ ‘ಆ್ಯಂಕರ್‌ ಬ್ಯಾಂಕ್‌‘ (ಆಧಾರ್‌ ಬ್ಯಾಂಕ್‌) ಎಂದು ಗುರುತಿಸುವುದಾಗಿ ಹೇಳಿದೆ.

ಮಹಿಳಾ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಸದ್ಯದ ಸವಾಲು. ಈ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್‌, ಮೌಲ್ಯವರ್ಧನೆ, ಆಕರ್ಷಣೀಯ ಪ್ಯಾಕಿಂಗ್ ವ್ಯವಸ್ಥೆಯನ್ನು ಒದಗಿಸಿ, ಬೃಹತ್‌ ಮಟ್ಟದಲ್ಲಿ ಮಾರುಕಟ್ಟೆ ಒದಗಿಸಿ, ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ವೇದಿಕೆ ಒದಗಿಸಲು ‘ಅಸ್ಮಿತೆ’ ಎಂಬ ಕಾರ್ಯಕ್ರಮ ಪ್ರಕಟಿಸಲಾಗಿದೆ. ಈ ಉದ್ದೇಶಕ್ಕಾಗಿ ಹೋಬಳಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಮಾರಾಟ ಮೇಳಗಳನ್ನು ನಡೆಸಲಾಗುವುದು. ಸರ್ಕಾರದ ವಿವಿಧ ಇಲಾಖೆಗಳಡಿಯಲ್ಲಿ ಮಾಡಲಾಗುವ ಸಂಗ್ರಹಣೆಯಲ್ಲಿ ಸ್ವಸಹಾಯ ಸಂಘಗಳಿಂದ ತಯಾರಿಸಿ ಉತ್ಪನ್ನಗಳಿಗೆ ಆದ್ಯತೆ ನೀಡುವ ಮತ್ತು ಈ ಸ್ವಸಹಾಯ ಗುಂಪುಗಳನ್ನು ಉತ್ತೇಜಿಸಲು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಸರ್ಕಾರಿ ಕಚೇರಿ ಸಂಕೀರ್ಣದಲ್ಲಿ ಈ ಸಂಘಗಳು ನಡೆಸುವ ಕ್ಯಾಂಟೀನ್‌ ಮತ್ತು ಮಾರಾಟ ಮಳಿಗೆ ಸ್ಥಾಪಿಸುವ ಪ್ರಸ್ತಾವವೂ ಇದೆ.

ಸ್ವಸಹಾಯ ಸಂಘಕ್ಕೆ ‘ಅಮೃತ’ ಸ್ಪರ್ಶ: ಸ್ವಸಹಾಯ ಸಂಘಗಳನ್ನು ಸಣ್ಣ ಉದ್ಯಮಗಳಾಗಿ ಮಾಡಲು ಅಮೃತ ಯೋಜನೆ ಘೋಷಿಸಲಾಗಿದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ - ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.

* ವಿಚ್ಛೇದಿತ, ಅವಿವಾಹಿತ ಮಹಿಳೆ, ವಿಧವಾ ವೇತನ, ಲೈಂಗಿಕ ಅಲ್ಪಸಂಖ್ಯಾತರ ಮಾಸಿಕ ಪಿಂಚಣಿ ₹ 600ರಿಂದ 800ಗೆ ಹೆಚ್ಚಳ

* ಆ್ಯಸಿಡ್ ದಾಳಿಗೊಳಗಾದ ಮಹಿಳೆಯರ ಪಿಂಚಣಿ ₹ 3 ಸಾವಿರದಿಂದ ₹ 10 ಸಾವಿರಕ್ಕೆ ಹೆಚ್ಚಳ,

* ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿ

* ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು, ಕಲಬುರಗಿಯಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿನಿಲಯ

* 18 ವರ್ಷ ಪೂರ್ಣಗೊಂಡ ಸಂಕಷ್ಟದಲ್ಲಿರುವ ಹೆಣ್ಣುಮಕ್ಕಳ ವಿದ್ಯಾಭ್ಯಾಸ ಹಾಗೂ ವೃತ್ತಿಪರ ಕೌಶಲ ತರಬೇತಿಗೆ ಆರು ಅನುಪಾಲನೆ ಗೃಹ

* ಬಾಲ್ಯ ವಿವಾಹ ತಡೆಗೆ ಕೊಪ್ಪಳದಲ್ಲಿ ಅನುಷ್ಠಾನಗೊಂಡಿರುವ ಸ್ಫೂರ್ತಿ ಯೋಜನೆ ವಿಸ್ತರಣೆ

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT