ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಉತ್ತೇಜನ ನೀಡಲಿರುವ ಬ್ಯಾಟರಿ ಸ್ವಾಪ್ ಪಾಲಿಸಿ

Last Updated 1 ಫೆಬ್ರುವರಿ 2022, 12:55 IST
ಅಕ್ಷರ ಗಾತ್ರ

ಮುಂಬೈ: ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಬ್ಯಾಟರಿ ಸ್ವಾಪಿಂಗ್ ಪಾಲಿಸಿ ಘೋಷಿಸಲಾಗಿದೆ. ಇದರಿಂದ ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಉದ್ಯಮ ಕ್ಷೇತ್ರ ಅಭಿಪ್ರಾಯ ವ್ಯಕ್ತಪಡಿಸಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಸ್ಟಾರ್ಟಪ್‌ಗಳಿಗೆ ಮತ್ತು ಬ್ಯಾಟರಿ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವ ಸಂಸ್ಥೆಗಳಿಗೆ ಹೊಸ ಬ್ಯಾಟರಿ ಸ್ವಾಪಿಂಗ್ ಪಾಲಿಸಿ ಅನುಕೂಲ ಕಲ್ಪಿಸಲಿದೆ.

ಚಾರ್ಜಿಂಗ್ ಸ್ಟೇಶನ್ ಸ್ಥಾಪನೆ ಮತ್ತು ಬ್ಯಾಟರಿ ಪೂರೈಕೆಯನ್ನು ಸೇವೆಯಂದು ಪರಿಗಣಿಸಿ, ಅದರ ಮೂಲಕ ಸಾರ್ವಜನಿಕ ಸಾರಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಬ್ಯಾಟರಿ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಜನರಲ್ಲಿ ಎಲೆಕ್ಟ್ರಿಕ್ ವಾಹನಗಳ ಕುರಿತು ಅರಿವು ಮೂಡಿಸುವುದು ಮತ್ತು ಹೆಚ್ಚಿನ ಬಳಕೆಗೆ ಪ್ರೋತ್ಸಾಹ ನೀಡುವುದಕ್ಕೆ ನೂತನ ಪಾಲಿಸಿ ಅವಕಾಶ ಒದಗಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT