ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಸಮಾನತೆಗೆ ಬಜೆಟ್‌ ಮುನ್ನುಡಿ: ಶಾಸಕ ಜಗದೀಶ ಶೆಟ್ಟರ್

Last Updated 4 ಮಾರ್ಚ್ 2022, 14:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಗೆ ಈ ಬಾರಿಯ ರಾಜ್ಯ ಬಜೆಟ್‌ ಮುನ್ನುಡಿ ಬರೆದಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವತಃ ಹುಬ್ಬಳ್ಳಿಯವರು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ₹250 ಕೋಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಎಫ್.ಎಂ.ಜಿ.ಸಿ. ಕ್ಲಸ್ಟರ್ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹ ಪ್ಯಾಕೇಜ್ ಘೋಷಿಸಿದ್ದಾರೆ. ನವಲಗುಂದ ಹಾಗೂ ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದ 5000 ಜನರಿಗೆ ಉದ್ಯೋಗ ದೊರಕಲಿದೆ. ಧಾರವಾಡ-ಕಿತ್ತೂರು ಬೆಳಗಾವಿ ನಡುವಿನ ನೇರ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಪೂರ್ಣಗೊಳಿಸಲು ಒತ್ತು ನೀಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ರಾಜ್ಯದ 2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ₹ 2,610 ಕೋಟಿ ಮೀಸಲು. ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಮುಖ್ಯವಾಗಿ ಹುಬ್ಬಳ್ಳಿಯ ನವನಗರದಲ್ಲಿ ಕರ್ನಾಟಕ ಕ್ಯಾನ್ಸರ್‌ ಸಂಸ್ಥೆಗೆ ವಿಶೇಷ ನೆರವು ನೀಡಿದ್ದಾರೆ. ಒಟ್ಟಾರೆ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಬಜೆಟ್ ಪೂರಕವಾಗಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT