ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್ | ಗಾರ್ಮೆಂಟ್ಸ್ ಕಾರ್ಮಿಕರಿಗೆ ಬಸ್ ಪಾಸ್ ಘೋಷಣೆ ಸಾಧ್ಯತೆ

Last Updated 4 ಮಾರ್ಚ್ 2020, 20:30 IST
ಅಕ್ಷರ ಗಾತ್ರ

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಖಾನೆಗಳ ಮಹಿಳಾ ಕಾರ್ಮಿಕರಿಗೆ ₹100 ದರದಲ್ಲಿ ಮಾಸಿಕ ಬಿಎಂಟಿಸಿ ಬಸ್ ಪಾಸ್ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಮಂಡಿಸಲಿರುವ 2020–21ನೇ ಸಾಲಿನ ಬಜೆಟ್‌ನಲ್ಲಿ ಈ ಕಾರ್ಯಕ್ರಮ ಘೋಷಣೆಯಾಗುವ ಸಾಧ್ಯತೆ ಇದೆ.

₹1,050 ಮೊತ್ತದ ಪಾಸ್‌ಗೆ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕರು ಶೇ 60, ಕಾರ್ಮಿಕರು ಮತ್ತು ಬಿಎಂಟಿಸಿ ತಲಾ ಶೇ 10 ಮತ್ತು ಕಾರ್ಮಿಕ ಇಲಾಖೆ ಶೇ 20ರಷ್ಟು ಮೊತ್ತ ಭರಿಸಲಿವೆ. ಬಿಎಂಟಿಸಿ ಸಲ್ಲಿಸಿದ್ದ ಪ್ರಸ್ತಾವನೆಗೆ ಕಾರ್ಮಿಕ ಇಲಾಖೆ ಅನುಮೋದನೆ ನೀಡಿದೆ. 4-5 ವರ್ಷಗಳಿಂದ ಈ ಪ್ರಸ್ತಾವನೆ ನನೆಗುದಿಗೆ ಬಿದ್ದಿತ್ತು. ನಗರದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಆಸಕ್ತಿ ವಹಿಸಿ ಈ ಕಾರ್ಯಕ್ರಮಕ್ಕೆ ಕಾಯಕಲ್ಪ ನೀಡಲು ಮುಂದಾಗಿದ್ದಾರೆ.

‘ಸಾಮಾನ್ಯವಾಗಿ ಗಾರ್ಮೆಂಟ್ಸ್ ಕಾರ್ಖಾನೆಗಳ ಸುತ್ತಮುತ್ತಲ ಬಡಾವಣೆಗಳಲ್ಲೇ ಕಾರ್ಮಿಕರು ನೆಲೆಸಿದ್ದು, ಬಿಎಂಟಿಸಿ ಬಸ್‌ನಲ್ಲಿ ಸಂಚಾರ ಮಾಡುವವರ ಸಂಖ್ಯೆ ಕಡಿಮೆ. ಈ ಯೋಜನೆಯನ್ನು ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿದರೆ ನಗರದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಿಂದ ಗಾರ್ಮೆಂಟ್ಸ್ ಕಾರ್ಖಾನೆಗಳಿಗೆ ಬರುವ ‌ಕಾರ್ಮಿಕರಿಗೆ ಅನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕು’ ಎಂದು ಗಾರ್ಮೆಂಟ್ಸ್‌ ಆ್ಯಂಡ್‌ ಟೆಕ್ಸ್‌ಟೈಲ್‌ ವರ್ಕರ್ಸ್‌ ಯೂನಿಯನ್‌ ಸಲಹೆಗಾರ ಕೆ.ಆರ್‌.ಜಯರಾಂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT