ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್ 2021: ರೈಲ್ವೆ ಬಜೆಟ್‌ನಲ್ಲಿ ಯಾವುದಕ್ಕೆ ಸಿಗಲಿದೆ ಆದ್ಯತೆ?

Last Updated 1 ಫೆಬ್ರುವರಿ 2021, 4:32 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021–22ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಇಂದು ಮಂಡಿಸಲಿದ್ದು, ರೈಲ್ವೆ ಬಜೆಟ್ ಕೂಡ ಇದರಲ್ಲಿ ಅಡಕಗೊಂಡಿರಲಿದೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಬಜೆಟ್‌ನಲ್ಲಿ ಆದ್ಯತೆ ನೀಡುವ ನಿರೀಕ್ಷೆ ಇದೆ.

ಈ ಬಾರಿಯ ಬಜೆಟ್‌ನಲ್ಲಿ ರೈಲ್ವೆಗೆ ₹1.79 ಲಕ್ಷ ಕೋಟಿ ಅನುದಾನ ಘೋಷಿಸುವ ನಿರೀಕ್ಷೆ ಇದೆ. ಕಳೆದ ವರ್ಷ ₹1.61 ಲಕ್ಷ ಕೋಟಿ ಅನುದಾನ ಘೋಷಿಸಲಾಗಿತ್ತು.

ರೈಲ್ವೆಯ ಸರಕು ಕಾರಿಡಾರ್‌ನ ಹೆಚ್ಚಿನ ವಿಭಾಗಗಳನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ಬಳಸಲಾಗುತ್ತಿದ್ದು, ಸರಕುಸಾಗಣೆಯನ್ನು ಆಕರ್ಷಿಸುವ ಕ್ರಮಗಳನ್ನು ಪ್ರಕಟಿಸಯವ ಸಾಧ್ಯತೆ ಇದೆ.

ರೈಲ್ವೆಯ ಆಧುನೀಕರಣ, ವೇಗ ವರ್ಧನೆ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.

ಅತ್ಯಾಧುನಿಕ ಕೋಚ್‌ಗಳು, ವೇಗದ ಪ್ಯಾಸೆಂಜರ್‌ ರೈಲುಗಳು, ಕೆಲವು ಹೊಸ ತೇಜಸ್ ರೈಲುಗಳು ಮತ್ತು ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಪ್ರತ್ಯೇಕ ರೈಲುಗಳನ್ನು ಘೋಷಿಸುವ ನಿರೀಕ್ಷೆ ಇದೆ. ರೈಲ್ವೆಯಲ್ಲಿ ಮೂಲಸೌಕರ್ಯ ಹೆಚ್ಚಳಕ್ಕೂ ಒತ್ತು ನೀಡುವ ಸಾಧ್ಯತೆ ಇದೆ.

ಪ್ರಮುಖ ಪ್ರವಾಸಿ ಸ್ಥಳಗಳು, ಧಾರ್ಮಿಕ ಕೇಂದ್ರಗಳಿಗೆ ಸಂಪರ್ಕ ಕಲ್ಪಿಸುವ ಹೈ–ಸ್ಪೀಡ್ ಖಾಸಗಿ ರೈಲುಗಳ ಬಗ್ಗೆಯೂ ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT