ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಮೊದಲ ಕಾಗದ ರಹಿತ ಡಿಜಿಟಲ್ ಬಜೆಟ್: ನಿರ್ಮಲಾ ಸೀತಾರಾಮನ್

Last Updated 1 ಫೆಬ್ರುವರಿ 2021, 6:11 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2021–22ನೇ ಹಣಕಾಸು ವರ್ಷದ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಕೇಂದ್ರ ಬಜೆಟ್ 2021 ಲೈವ್ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ದಶಕದ ಮೊದಲ ಬಜೆಟ್...
ಈ ದಶಕದ ಮೊದಲ ಬಜೆಟ್ ಕೂಡಾ ಇದಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ದೇಶದೊಳಗಿನ ಅಥವಾ ದೇಶದ ಪ್ರದೇಶಗಳ ಮೇಲೆ ಸಂಭವಿಸಿರಬಹುದಾದ ವಿಪತ್ತುಗಳ ದೃಷ್ಟಿಯಿಂದ ನೋಡಿದರೆ ಹಿಂದೆಂದೂ ಕಂಡಿರದಂತಹ ಪರಿಸ್ಥಿತಿಯಲ್ಲಿ ಈ ಬಾರಿ ಬಜೆಟ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಬಡ ಜನರಿಗೆ ಸಹಾಯ ಮಾಡಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಒತ್ತಿ ಹೇಳಿದರು. ಕೋವಿಡ್-19 ಎದುರಿಸುವಲ್ಲಿ ಲಸಿಕೆ ಅಭಿವೃದ್ಧಿಪಡಿಸಿರುವುದನ್ನು ಉಲ್ಲೇಖಿಸಿದರು.

ದೇಶದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಡಿಜಿಟಲ್ ಬಜೆಟ್ ಮಂಡಿಸಲಾಗುತ್ತಿದೆ.


ಕೋವಿಡ್-19 ಹಿನ್ನೆಲೆಯಲ್ಲಿ ಬಜೆಟ್ ಪ್ರತಿಗಳನ್ನು ಮುದ್ರಿಸಲಾಗುತ್ತಿಲ್ಲ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಯ ಬಳಿಕ ಸಾಫ್ಟ್ ಕಾಪಿಗಳನ್ನು ಸಂಸದರಿಗೆ ಹಂಚಲಾಗುವುದು. ಸಾರ್ವಜನಿಕರು ಆ್ಯಪ್ ಮೂಲಕವೂ ಬಜೆಟ್ ಪ್ರತಿಗಳನ್ನು ಡೌನ್‌ಲೋಡ್ ಮಾಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT