ಉಳಿತಾಯ, ಹೂಡಿಕೆ, ಜನರು ಮಾಡುವ ವೆಚ್ಚ ಹಾಗೂ ಅಭಿವೃದ್ಧಿಯನ್ನು ಹೆಚ್ಚಿಸುವ ‘ಜನಸಾಮಾನ್ಯರ ಬಜೆಟ್’ ಇದು. ದೇಶದ ಅಭಿವೃದ್ಧಿಯಲ್ಲಿ ಜನರನ್ನು ಪಾಲುದಾರರನ್ನಾಗಿ ಮಾಡಲು ಬಲವಾದ ಅಡಿಪಾಯವನ್ನು ಹಾಕುತ್ತದೆ. ಮಧ್ಯಮವರ್ಗದವರ ತೆರಿಗೆ ಹೊರೆ ತಗ್ಗಿದೆ
ನರೇಂದ್ರ ಮೋದಿ, ಪ್ರಧಾನಿ
ಈ ಬಜೆಟ್, ಗುಂಡೇಟಿನಿಂದ ಆಗಿರುವ ದೊಡ್ಡ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದಂತಿದೆ. ಜಾಗತಿಕ ಅನಿಶ್ಚಿತತೆಯ ಈಗಿನ ಸಂದರ್ಭದಲ್ಲಿ ಆರ್ಥಿಕ ಬಿಕ್ಕಟ್ಟು ಬಗೆಹರಿಸಲು ಭಾರಿ ಪಲ್ಲಟವೇ ಆಗಬೇಕಿದೆ. ಕೇಂದ್ರ ಸರ್ಕಾರವನ್ನು ‘ಯೋಚನೆಗಳ ದಿವಾಳಿತನ’ ಕಾಡುತ್ತಿದೆ
ರಾಹುಲ್ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ
ಮೋದಿ ಸರ್ಕಾರ ಕರ್ನಾಟಕಕ್ಕೆ ಖಾಲಿ ಚೊಂಬು ಕೊಡುವುದನ್ನು ಮುಂದುವರಿಸಿದೆ. ತೆರಿಗೆ ಪಾವತಿಯಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದ್ದರೂ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ರಾಜಕೀಯ ಕಾರಣಗಳಿಗಾಗಿ ಹೆಚ್ಚಿನ ಪಾಲು ನೀಡಲಾಗಿದೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
₹12 ಲಕ್ಷವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಎಲ್ಲರಿಗೂ ಅನುಕೂಲವಾಗಿದೆ. ಜಲಜೀವನ್ ಮಿಷನ್ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರದ ಯೋಜನೆಗಳು ರಾಜ್ಯಕ್ಕೂ ಸಿಗಲಿವೆ. ಹಾಗಿದ್ದರೂ ರಾಜ್ಯಕ್ಕೆ ಏನೂ ನೀಡಿಲ್ಲ ಎಂದು ಸುಳ್ಳು ಹೇಳುವುದೇಕೆ?