ನವದೆಹಲಿ: ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸುವುದಾಗಿ ಬಜೆಟ್ ಭಾಷಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್, ಈ ಕುರಿತು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡನೆ ವೇಳೆ ಆದಾಯ ತೆರಿಗೆ ಕಾಯ್ದೆ 1961 ಅನ್ನು ಸಮಗ್ರ ಪರಿಶೀಲನೆಗೆ ಒಳಪಡಿಸುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಹೊಸ ಆದಾಯ ತೆರಿಗೆ ಮಸೂದೆಯನ್ನು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಪ್ರಸ್ತುತ ಇರುವ ಆದಾಯ ತೆರಿಗೆ ಕಾಯ್ದೆ ಬದಲಿಗೆ ಗ್ರಹಿಕೆಗೆ ಅನುಕೂಲಕರವಾಗುವಂತೆ ಸರಳೀಕರಣ ಮತ್ತು ಪುಟಗಳ ಸಂಖ್ಯೆ ಕಡಿಮೆ ಮಾಡಿ ಹೊಸ ಕಾಯ್ದೆ ಮಂಡನೆಯಾಗುವ ಸಾಧ್ಯತೆಯಿದೆ.
.Union Budget 2025: ಕೇಂದ್ರ ಬಜೆಟ್ ನೇರ ಪ್ರಸಾರ ಇಲ್ಲಿ ವೀಕ್ಷಿಸಿ.Budget 2025 LIVE: ರಕ್ಷಣಾ ಕ್ಷೇತ್ರಕ್ಕೆ ಗರಿಷ್ಠ; ವಿಜ್ಞಾನ ಕ್ಷೇತ್ರಕ್ಕೆ ಕನಿಷ್ಠ ಅನುದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.