ಭಾನುವಾರ, ಜುಲೈ 3, 2022
27 °C

Budget 2021: ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಶೀಘ್ರದಲ್ಲೇ ಜಾರಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

PTI

ಬೆಂಗಳೂರು: ಆರ್ಥಿಕ ಪ್ರಗತಿ ಉತ್ತೇಜನದ ಜತೆಗೆ ವಿವಿಧ ಸಾಮಾಜಿಕ ಕಲ್ಯಾಣ, ಆರೋಗ್ಯ ಯೋಜನೆಗಳನ್ನು ಪ್ರಸ್ತುತ ಬಜೆಟ್‌ನಲ್ಲಿ ಹಣಕಾಸು ಸಚಿವರು ಘೋಷಿಸಿದ್ದಾರೆ. ಅದರ ಜತೆಗೆ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅತ್ಯಂತ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದಾರೆ. ಅಂದರೆ, ಇನ್ನು ದೇಶಾದ್ಯಂತ ಒಂದೇ ಪಡಿತರ ಕಾರ್ಡ್ ಯೋಜನೆ ಜಾರಿಗೆ ಬರಲಿದೆ. ಶೀಘ್ರದಲ್ಲೇ 32 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೊಸ ಪಡಿತರ ವ್ಯವಸ್ಥೆ ಬರಲಿದೆ.

ಅಸಂಘಟಿತ ವಲಯದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸಹಿತ ವಿವಿಧ ವಲಯದ ಜನರಿಗೆ ಇದರಿಂದ ಅನುಕೂಲವಾಗಲಿದೆ. ಪ್ರತಿ ತಿಂಗಳ ಪಡಿತರವನ್ನು ಓರ್ವ ವ್ಯಕ್ತಿ ಯಾವುದೇ ರಾಜ್ಯದಲ್ಲಾದರೂ ಪಡೆಯಬಹುದು.

ಅಂದರೆ, ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ಜಾರಿ ಜತೆಗೆ ವಲಸೆ ಕಾರ್ಮಿಕರು ಕೂಡ ಯಾವುದೇ ಸಮಸ್ಯೆಯಿಲ್ಲದೆ ಪಡಿತರ ಪಡೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಇದನ್ನೂ ಓದಿ: 

ಜತೆಗೆ ಮನೆ ಬದಲಾಯಿಸಿದ್ದರೆ, ಮನೆಯಿಂದ ಪಡಿತರ ಕೇಂದ್ರ ದೂರದಲ್ಲಿದ್ದರೂ, ಮನೆಗೆ ಸಮೀಪದ ಯಾವುದೇ ಕೇಂದ್ರದಿಂದ ಪಡಿತರವನ್ನು ಪ್ರತಿ ತಿಂಗಳು ಪಡೆದುಕೊಳ್ಳಲು ಸಹಕಾರಿಯಾಗಲಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು