ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2022: ಜಲಸಾರಿಗೆ–ಮೀನುಗಾರಿಕೆಗೆ ಸಿಕ್ಕಿದ್ದು ಎಷ್ಟು?

Last Updated 4 ಮಾರ್ಚ್ 2022, 12:12 IST
ಅಕ್ಷರ ಗಾತ್ರ

ಬೆಂಗಳೂರು: ಕಾರವಾರದಲ್ಲಿ ರಾಜ್ಯದ ಮೊದಲ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಕಾರವಾರ ಬಂದರು ವಿಸ್ತರಣೆಗೂ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ.

*ಕೇಂದ್ರದ ಸಾಗರ ಮಾಲಾ ಯೋಜನೆಯಡಿ ಅಂದಾಜು ₹1,880 ಕೋಟಿ ವೆಚ್ಚದಲ್ಲಿ 24 ಯೋಜನೆಗಳ ಅನುಷ್ಠಾನ.

*ಬೈಂದೂರು ಹಾಗೂ ಮಲ್ಪೆಯಲ್ಲಿ ವಿವಿದೋದ್ದೇಶ ಬಂದರು ನಿರ್ಮಾಣದ ಕಾರ್ಯಸಾಧ್ಯತೆ ಬಗ್ಗೆ ವರದಿ ತಯಾರಿ.

*ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ₹250 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿರ್ಮಾಣ.

*ಕೇಣಿ–ಬೇಲೆಕೇರಿಯಲ್ಲಿ ಗ್ರೀನ್‌–ಫೀಲ್ಡ್‌ ಬಂದರು ಅಭಿವೃದ್ಧಿ.

*₹350 ಕೋಟಿ ವೆಚ್ಚದಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಲಕ್ಷದ್ವೀಪ ಪ್ರದೇಶಕ್ಕೆ ಮೀಸಲಾದ ಜೆಟ್ಟಿ ಮತ್ತು ಇತರ ಮೌಲಸೌಕರ್ಯ ಕಲ್ಪಿಸಲು ಒತ್ತು.

ಇವನ್ನೂ ಓದಿ:
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT