ಶುಕ್ರವಾರ, ಮೇ 20, 2022
23 °C

ಅದ್ಭುತ ಅಲ್ಲದಿದ್ದರೂ ಸಮುಚಿತ ಬಜೆಟ್: ಪ್ರಾಧ್ಯಾಪಕ ಪ್ರೊ. ಎಸ್.ಆರ್.ಕೇಶವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೇಂದ್ರದ ಬಜೆಟ್‌ ಗಮನಿಸಿದರೆ ಕೋವಿಡ್ ಕಾಲದಲ್ಲಿ ಇದಕ್ಕಿಂತ ಹೆಚ್ಚಿಗೆ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಅದ್ಬುತ ಅಲ್ಲದಿದ್ದರೂ ಸಮುಚಿತ ಬಜೆಟ್ ಎನ್ನಬಹುದು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ  ಪ್ರಾಧ್ಯಾಪಕ ಪ್ರೊ. ಎಸ್.ಆರ್.ಕೇಶವ ಅಭಿಪ್ರಾಯಪಟ್ಟರು.

 ‘ಪ್ರಜಾವಾಣಿ’ಯ ಫೇಸ್‌ಬುಕ್ ಲೈವ್ ಚರ್ಚೆಯಲ್ಲಿ ಮಾತನಾಡಿದ ಅವರು, ‘ಶತಮಾನದಲ್ಲೆ ಕಂಡರಿಯದ ರೀತಿಯ ಬಜೆಟ್ ಮಂಡಿಸುತ್ತೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಾಗ ನಿರೀಕ್ಷೆ ಹೆಚ್ಚಿಸಿತ್ತು. ಅದು ಹುಸಿ ಆಯಿತು. ಆದರೆ, ವಾಸ್ತವ ಗಮನಿಸಿದರೆ ಇದಕ್ಕಿಂತ ಹೆಚ್ಚಿಗೆ ಏನನ್ನೂ ಮಾಡಲು ಸಾಧ್ಯವಿರಲಿಲ್ಲ’ ಎಂದು ಪ್ರತಿಪಾದಿಸಿದರು.

‘ಬಜೆಟ್ ಬಗ್ಗೆ ಮಾತನಾಡುವ ಮುನ್ನ ಯಾವ ಕಾಲಘಟ್ಟದಲ್ಲಿ ಬಜೆಟ್ ಮಂಡನೆಯಾಗಿದೆ ಎಂಬುದನ್ನು ನೋಡಬೇಕು.  ಲಾಕ್‌ಡೌನ್‌ ಕಾರಣದಿಂದ ಪ್ರತಿ ವಲಯವೂ ತೊಂದರೆಗೆ ಸಿಲುಕಿತ್ತು. ಅಸಮಾನತೆ, ಬಡತನ, ನಿರುದ್ಯೋಗ ಹೆಚ್ಚಾಗಿದೆ. 4 ಕೋಟಿ ಜನರು ಬಡತನಕ್ಕೆ ದೂಡಲ್ಪಟ್ಟಿದ್ದರೆ, 2.8 ಕೋಟಿ ನಿರುದ್ಯೋಗಿಗಳು ಹೆಚ್ಚಾಗಿದ್ದಾರೆ ಎಂಬ ಅಂದಾಜಿದೆ’ ಎಂದು ಹೇಳಿದರು.

‘ಆರೋಗ್ಯ ಮತ್ತು ಮೂಲಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಸುಂಕ ಏರಿಕೆಗೆ ಇದ್ದ ಎರಡು ದಾರಿ ಎಂದರೆ ತಂಬಾಕು ಮತ್ತು ಮದ್ಯ ಉದ್ಯಮ. ಅದನ್ನೇ ಈ ಬಾರಿಯೂ ಮಾಡಲಾಗಿದೆ. ತೈಲ ಬೆಲೆ ಹೆಚ್ಚಳವಾದರೂ ಅದರ ಹೊರೆಯನ್ನು ಗ್ರಾಹಕರ ಮೇಲೆ ಬಿಡುವುದಿಲ್ಲ ಎಂದು ಹೇಳಿರುವುದು ಸಮಾಧಾನ ತಂದಿದೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು