ಭಾನುವಾರ, ಮೇ 9, 2021
28 °C

ಬೇಡಿಕೆ ಹೆಚ್ಚಿಸಲು ಗಮನ ಕೊಡಿ: ಇಂಡಿಯಾ ರೇಟಿಂಗ್ಸ್‌ ಸಂಸ್ಥೆ ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

DH File

ಮುಂಬೈ: ಬೇಡಿಕೆಯನ್ನು ಹೆಚ್ಚಿಸಲು ಸರ್ಕಾರ ಗಮನ ನೀಡುವಂತೆ ಈ ಬಾರಿಯ ಬಜೆಟ್ ಪ್ರೇರಣೆ ನೀಡಬೇಕು ಎಂದು ಇಂಡಿಯಾ ರೇಟಿಂಗ್ಸ್‌ ಸಂಸ್ಥೆಯ ವರದಿ ಹೇಳಿದೆ. ಕೋವಿಡ್–19 ಸಾಂಕ್ರಾಮಿಕ ಅಪ್ಪಳಿಸಿದಾಗಿನಿಂದಲೂ ಉತ್ಪಾದನೆ ಮತ್ತು ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಗಮನ ನೀಡಲಾಗಿದೆ ಎಂದೂ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಸೃಷ್ಟಿಸುವತ್ತ ಗಮನ ನೀಡಲು ಇದು ಸಕಾಲ. ಇಲ್ಲದಿದ್ದರೆ ಈಗ ಕಾಣುತ್ತಿರುವ ಚೇತರಿಕೆಯು ಚೈತನ್ಯ ಕಳೆದುಕೊಳ್ಳುತ್ತದೆ. ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಗಮನ ನೀಡಿದ್ದರಲ್ಲಿ ಯಾವ ತಪ್ಪೂ ಇಲ್ಲ. ಆದರೆ, ಉತ್ಪನ್ನಗಳು ಮತ್ತು ಸೇವೆಗಳಿಗೆ ಬೇಡಿಕೆ ಅಗತ್ಯ ಪ್ರಮಾಣದಲ್ಲಿ ಇಲ್ಲದಿದ್ದರೆ ಆರ್ಥಿಕ ಚೇತರಿಕೆಗೆ ಅಡ್ಡಿಯಾಗುತ್ತದೆ ಎಂದು ಸುನಿಲ್ ಕುಮಾರ್ ಸಿನ್ಹಾ ಅವರು ವರದಿಯಲ್ಲಿ ಹೇಳಿದ್ದಾರೆ.

ಸರ್ಕಾರ ಮತ್ತು ಆರ್‌ಬಿಐ ಕೈಗೊಂಡಿರುವ ಕ್ರಮಗಳ ಪರಿಣಾಮವಾಗಿ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳು ನಿವಾರಣೆ ಆದರೂ, ಸರಕು ಮತ್ತು ಸೇವೆಗಳಿಗೆ ಸರಿಯಾದ ಬೇಡಿಕೆ ಇಲ್ಲದಿರುವ ಕಾರಣ ಸಮಸ್ಯೆ ಸೃಷ್ಟಿಯಾಗಬಹುದು ಎಂದು ಸಿನ್ಹಾ ಅವರು ಎಚ್ಚರಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸುವ ಮೂಲಸೌಕರ್ಯ ಯೋಜನೆಗಳ ಮೇಲೆ ಹೆಚ್ಚಿನ ಹೂಡಿಕೆ ಆಗಬೇಕು. ಬಡ ವರ್ಗಗಳಿಗೆ ಹಣಕಾಸಿನ ನೆರವು ನೀಡಬೇಕು. ನರೇಗಾ ಯೋಜನೆಗೆ ಇನ್ನಷ್ಟು ಅನುದಾನ ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು