ಬುಧವಾರ, ಡಿಸೆಂಬರ್ 8, 2021
18 °C

Budget 2021: ದೇಶದ ವಿವಿಧೆಡೆ 7 ಜವಳಿ ಪಾರ್ಕ್‌ ಸ್ಥಾಪನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜವಳಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ದೇಶದ ವಿವಿಧೆಡೆ 7 ಜವಳಿ ಪಾರ್ಕ್‌ಗಳನ್ನು ಸ್ಥಾಪಿಸಲಿದೆ ಎಂದು  ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

‘ಗುಣಮಟ್ಟ ಹಾಗೂ ರಫ್ತು ವಿಷಯದಲ್ಲಿ ಜಾಗತಿಕವಾಗಿ ಸ್ಪರ್ಧಾತ್ಮಕವಾಗಿರುವಂತೆ ಈ ವಲಯವನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಅವರು ಹೇಳಿದರು.

‘ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ನೀಡುವ (ಪಿಎಲ್‌ಐ) ಯೋಜನೆಯಡಿ ಜವಳಿ ಉದ್ಯಮ ಸ್ಥಾಪಿಸುವ ಜೊತೆಗೆ, ಈ ಕ್ಷೇತ್ರದಲ್ಲಿ ಬೃಹತ್‌ ಪ್ರಮಾಣದ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗುವುದು’ ಎಂದೂ  ಹೇಳಿದರು.

ಜವಳಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ‘ಮಿತ್ರಾ’ (ಮೆಗಾ ಇಂಟಿಗ್ರೇಟೆಡ್‌ ಟೆಕ್ಸ್‌ಟೈಲ್‌ ರೀಜನ್ ಆ್ಯಂಡ್‌ ಅಪರೇಲ್‌) ಎಂಬ ಯೋಜನೆಯನ್ನು ಈಗಾಗಲೇ ಘೋಷಿಸಿದೆ. ಇದರಡಿ 1,000 ಎಕರೆ ಪ್ರದೇಶದಲ್ಲಿ ಎಲ್ಲ ಮೂಲಸೌಕರ್ಯಗಳನ್ನು ಹೊಂದಿರುವ ಜವಳಿ ಪಾರ್ಕ್‌, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ಆ್ಯಂಡ್‌ ಡಿ) ಸೌಲಭ್ಯಗಳು ಇರಲಿವೆ.

‘ಮಿತ್ರಾ’ ಅಡಿ ಈಗಾಗಲೇ 59 ಜವಳಿ ಪಾರ್ಕ್‌ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಈ ಪೈಕಿ 22 ಪಾರ್ಕ್‌ಗಳ ನಿರ್ಮಾಣ ಪೂರ್ಣಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು