ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ 50 ಕೆಫೆ ಹೋಟೆಲ್,ಸಿರಿಧಾನ್ಯ ಉತ್ಪನ್ನಗಳಿಗಾಗಿ ’ನಮ್ಮ ಮಿಲ್ಲೆಟ್’

Published 16 ಫೆಬ್ರುವರಿ 2024, 6:07 IST
Last Updated 16 ಫೆಬ್ರುವರಿ 2024, 6:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದಿಂದ 50 ಕೆಫೆ ಹೋಟೆಲ್ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ, ₹7.5 ಕೋಟಿ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹೋಟೆಲ್‌ಗಳಲ್ಲಿ ಸ್ಥಳೀಯ ಆಹಾರಕ್ಕೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ರೈತ ಸಮೃದ್ಧಿ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ಇದರನ್ವಯ, ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿದೆ.

ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ನಮ್ಮ ‘ಮಿಲ್ಲೆಟ್’ ಎಂಬ ಹೊಸ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಮದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT