ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್: ಅನ್ನ ಸುವಿಧಾ ಮೂಲಕ 80 ವರ್ಷ ಮೇಲ್ಪಟ್ಟವರಿಗೆ ಆಹಾರ ಧಾನ್ಯ ಹೋಂ ಡೆಲಿವರಿ

Published 16 ಫೆಬ್ರುವರಿ 2024, 9:46 IST
Last Updated 16 ಫೆಬ್ರುವರಿ 2024, 9:46 IST
ಅಕ್ಷರ ಗಾತ್ರ

ಬೆಂಗಳೂರು: ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಅನ್ನ–ಸುವಿಧಾ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. 

ಇಂದು ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಿದ ಅವರು, ‘ಅನ್ನ–ಸುವಿಧಾ ಯೋಜನೆಯಡಿ ಹೋಮ್ ಡೆಲಿವರಿ ಆ್ಯಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು’ ಎಂದು ಹೇಳಿದ್ದಾರೆ.

ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ಬಾರಿ ನಾವು ನೀಡಿದ್ದ ಭರವಸೆಯಂತೆ ಹೆಚ್ಚುವರಿಯಾಗಿ ಐದು ಕೆ.ಜಿ. ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಅಸಹಕಾರ ಧೋರಣೆಯಿಂದಾಗಿ ಅಕ್ಕಿ ಲಭ್ಯವಾಗದ ಕಾರಣ, ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ. ಅಕ್ಕಿಗೆ ₹34 ನಂತೆ ಪ್ರತಿ ಮಾಹೆ ₹170 ನೇರ ನಗದು ವರ್ಗಾವಣೆ ಮಾಡಲಾಗಿದೆ. 2024ರ ಜನವರಿವರೆಗೆ ₹4.02 ಕೋಟಿ ಫಲಾನುಭವಿಗಳಿಗೆ ₹4,595 ಕೋಟಿ ವರ್ಗಾವಣೆ ಮಾಡಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT