ಸೋಮವಾರ, ಏಪ್ರಿಲ್ 6, 2020
19 °C

ಸರ್ಕಾರದಿಂದ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. 

ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಈ ನಿರ್ಧಾರ ಘೋಷಿಸಿದ್ದಾರೆ. 

ಚಿತ್ರದುರ್ಗದ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ನಿರ್ಮಾಣವಾಗುತ್ತಿದ್ದು, ಅದಕ್ಕಾಗಿ ಈ ವರ್ಷ ₹20 ಕೋಟಿ ರೂ.ಗಳ ನೆರವು ನೀಡಲಾಗಿದೆ.  

ಇದೇ ವೇಳೆ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಅದಕ್ಕಾಗಿ  ₹66 ಕೋಟಿ. ರೂ ಮೀಸಲಿಡಲಾಗಿದೆ ಎಂದು ಸಿಎಂ ತಿಳಿಸಿದರು. 

ಬಸವಕಲ್ಯಾಣದಲ್ಲಿ ₹500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪಕ್ಕೆ ಈ ಬಾರಿ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ನೀಡಲಾಗಿದೆ. 

ಸಂತ ಶಿಶುನಾಳ ಶರೀಫರ ಸಮಾಧಿ ಇರುವ ಹಾವೇರಿಯ ಶಿಶುನಾಳ ಗ್ರಾಮದಲ್ಲಿ ಐದು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಸಿಎಂ ಘೋಷಿಸಿದ್ಧಾರೆ. 

ಮಾಜಿ ಮುಖ್ಯಮಂತ್ರಿ ದಿ. ಎಸ್‌. ನಿಜಲಿಂಗಪ್ಪ ಅವರು ವಾಸವಿದ್ದ ಚಿತ್ರದುರ್ಗದ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ಐದು ಕೋಟಿ, ಸಾಹಿತಿ ಎಸ್‌.ಎಲ್‌ ಬೈರಪ್ಪ ಅವರ ಹುಟ್ಟೂರು ಹಾಸನದ ಸಂತೆಶಿವರ ಗ್ರಾಮದ ಅಭಿವೃದ್ಧಿಗಾಗಿ ಐದು ಕೋಟಿ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು