ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಬಜೆಟ್ 2020 | ನಲ್ಲಿ ನೀರು ಪೂರೈಸಲು ಜಲ ಜೀವನ ಯೋಜನೆ

ನೀರಿನ ಮೂಲಗಳ ಪುನಶ್ಚೇತನಕ್ಕೆ ಕ್ರಮ
Last Updated 1 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ನವದೆಹಲಿ: 2020–21ನೇ ಸಾಲಿನಲ್ಲಿ ಜಲ ಜೀವನ ಮಿಷನ್‌ಗಾಗಿ ₹11,500 ಕೋಟಿ ನಿಗದಿಪಡಿಸಲಾಗಿದೆ.

ಎಲ್ಲಾ ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಉದ್ದೇಶಿಸಿದ್ದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದಾಗ ಜಲ ಜೀವನ ಯೋಜನೆಯನ್ನು ಘೋಷಿಸಿದ್ದರು ಎಂದು ಸಚಿವೆ ನಿರ್ಮಲಾ ಹೇಳಿದರು.

‘ಈ ಯೋಜನೆಗಾಗಿ ನಮ್ಮ ಸರ್ಕಾರ ₹ 3.60 ಲಕ್ಷ ಕೋಟಿ ಹಣ ಮಂಜೂರು ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಬಜೆಟ್‌ನಲ್ಲಿ ₹ 11,500 ಕೋಟಿ ಮೀಸಲಿಡಲಾಗಿದೆ’ ಎಂದು ಹೇಳಿದರು.

ಸ್ಥಳೀಯವಾಗಿ ಲಭ್ಯವಿರುವ ನೀರಿನ ಮೂಲಗಳನ್ನು ವೃದ್ಧಿಸುವುದು, ಈಗಿರುವ ನೀರಿನ ಮೂಲಗಳನ್ನು ಪುನಶ್ಚೇತನಗೊಳಿಸು
ವುದು ಮತ್ತು ಜಲ ಮರುಪೂರಣಗೊಳಿಸುವುದು ಈ ಯೋಜನೆಯ ಪ್ರಮುಖ ಅಂಶಗಳು.

ಹತ್ತು ಲಕ್ಷ ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಈ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT