ಶುಕ್ರವಾರ, ಫೆಬ್ರವರಿ 21, 2020
24 °C

ಕೇಂದ್ರ ಬಜೆಟ್‌ | ಉದ್ಯೋಗ ಖಾತ್ರಿ: ಶೇಕಡ 13ರಷ್ಟು ಕಡಿತ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ:  ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗೆ ಈ ಬಾರಿಯೂ ಅನುದಾನವನ್ನು ಕಡಿತಗೊಳಿಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ಎಂಜಿಎನ್‌ಆರ್‌ಇಜಿಎಸ್) ₹9500 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ.

ಈ ಯೋಜನೆಗೆ 2020–21ನೇ ಸಾಲಿನಲ್ಲಿ ₹61,500 ಕೋಟಿ ಹಂಚಿಕೆ ಮಾಡಲಾಗಿದೆ. ಆದರೆ, 2019–20ನೇ ಸಾಲಿನಲ್ಲಿ ₹71,000.81 ಕೋಟಿ ನೀಡಲಾಗಿತ್ತು. ಈ ಮೂಲಕ ಶೇಕಡ 13ರಷ್ಟು ಅನುದಾನ ಕಡಿತಗೊಳಿಸಲು ಉದ್ದೇಶಿಸಲಾಗಿದೆ.

 2008–2014ರಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಎಂಜಿಎನ್‌ಆರ್‌ಇಜಿಎಸ್ ಅಡಿಯಲ್ಲಿ ₹1.91 ಲಕ್ಷ ಕೋಟಿ ಖರ್ಚು ಮಾಡಲಾಗಿತ್ತು. ಬಳಿಕ, 2014–2020ರ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ₹2.95 ಲಕ್ಷ ಕೋಟಿ ಖರ್ಚು ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು