ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್: ವಿವಿಧ ಮಠಗಳ ಅಭಿವೃದ್ಧಿಗೆ ಸರ್ಕಾರದಿಂದ ಆರ್ಥಿಕ ಸಹಾಯ

Last Updated 5 ಮಾರ್ಚ್ 2020, 10:42 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಒತ್ತು ನೀಡಿದ್ದಾರೆ.

ಬೆಂಗಳೂರು ನಗರದ ನಾಲ್ಕೂ ದಿಕ್ಕಿನಲ್ಲಿ ₹ 60 ಕೋಟಿ ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರದ ಮಾದರಿಯಲ್ಲಿ ಕಲಾಕ್ಷೇತ್ರಗಳ ನಿರ್ಮಾಣ ಮಾಡಲಾಗುವುದು. ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸ್ಥಾಪನೆಗೆ ₹ 50 ಲಕ್ಷ ಅನುದಾನ ನೀಡುವುದಾಗಿ ತಿಳಿಸಿರುವ ಅವರು, ಚಿತ್ರಸಂತೆ ಕಾರ್ಯಕ್ರಮಕ್ಕೆ ₹ 1 ಕೋಟಿ ನೆರವು ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಅನಂತ ಕುಮಾರ್ ಪ್ರತಿಷ್ಠಾನದ ವತಿಯಿಂದ ನಾಯಕತ್ವ ನಿರ್ಮಾಣ ಹಾಗೂ ನೀತಿ ನಿರೂಪಣಾ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ₹ 20 ಕೋಟಿಅನುದಾನ ನೀಡುವುದು ಮತ್ತು ಪ್ರಸಕ್ತ ಸಾಲಿನಲ್ಲಿ ₹ 10 ಕೋಟಿ ನಿಗದಿ ಮಾಡಲಾಗಿದೆ. ಸರ್ಕಾರದ ವತಿಯಿಂದ ಜನವರಿ 1ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

* ವಿವಿಧ ಮಠಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರದ ಕ್ರಮ.

* ಭಾರತದ ವಿವಿಧ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಅತಿಥಿಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ ₹ 25 ಕೋಟಿ ಅನುದಾನ.

* ಹಾವೇರಿ ಜಿಲ್ಲೆಯಲ್ಲಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರೋತ್ಸಾಹ.

* ರಾಜ್ಯದ 60 ವರ್ಷ ಮೀರಿದ ಬಡವರಿಗೆ ಉಚಿತವಾಗಿ ರಾಜ್ಯದ ಹಾಗೂ ದೇಶದ ಪ್ರಸಿದ್ಧ ತೀರ್ಥ ಕ್ಷೇತ್ರ ದರ್ಶಿಸಲು “ಜೀವನ ಚೈತ್ರ ಯಾತ್ರೆ” ಯೋಜನೆ ಜಾರಿಗೆ ₹20 ಕೋಟಿ ಅನುದಾನ.

* ರಾಜ್ಯದಲ್ಲಿರುವ 25,000ಕ್ಕೂ ಹೆಚ್ಚು ಐತಿಹಾಸಿಕ ಮಹತ್ವವುಳ್ಳ ದೇವಸ್ಥಾನಗಳು, ಪ್ರಾಚೀನ ಸ್ಥಳಗಳು, ಸ್ಮಾರಕಗಳ ಪುನರುಜ್ಜೀವನಕ್ಕೆ “ಸಂರಕ್ಷಣಾ” ಯೋಜನೆ ಜಾರಿ.

* ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹20 ಕೋಟಿ ಅನುದಾನ.

ಇನ್ನಷ್ಟು:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT