ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget: ಭದ್ರಾ ಮೇಲ್ಡಂಡೆ ಯೋಜನೆಗೆ ₹5,300 ಕೋಟಿ ಘೋಷಣೆ

Last Updated 1 ಫೆಬ್ರುವರಿ 2023, 16:08 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದ ನೀರಾವರಿಗೆ ಕೇಂದ್ರ ಬಜೆಟ್‌ನಲ್ಲಿ ಭರ್ಜರಿ ಗಿಫ್ಟ್‌ ಸಿಕ್ಕಿದೆ.

ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಬಜೆಟ್ 2023: ನಿಮ್ಮ ಆದಾಯ ತೆರಿಗೆ ಲೆಕ್ಕಾಚಾರ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರು (ತುಂಗಾ ನದಿಯಿಂದ 17.40 ಟಿಎಂಸಿ ಅಡಿ ಹಾಗೂ ಭದ್ರಾ ಜಲಾಶಯದಿಂದ 12.50 ಟಿಎಂಸಿ ಅಡಿ) ಬಳಕೆ ಮಾಡಲಾಗುತ್ತದೆ. ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ (5,57,022 ಎಕರೆ ) ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ತುಂಬಿಸುವ ಯೋಜನೆ ಇದಾಗಿದೆ.

ಈ ಯೋಜನೆಗೆ ತಗಲುವ ಒಟ್ಟಾರೆ ವೆಚ್ಚ ₹21,473.67 ಕೋಟಿ. ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾಗಿರುವುದರಿಂದ ಈಗ ಕೇಂದ್ರ ಸರ್ಕಾರ ಈ ಯೋಜನೆಗೆ ₹ 5300 ಕೋಟಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT