ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಬುಡಕಟ್ಟು ಸಮುದಾಯಗಳ ಆರ್ಥಿಕ ಸ್ಥಿತಿ ಸುಧಾರಣೆಗೆ ಯೋಜನೆ

Last Updated 1 ಫೆಬ್ರುವರಿ 2023, 13:33 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಾಚೀನ ಬುಡಕಟ್ಟು ಸಮುದಾಯದಲ್ಲಿನ ದುರ್ಬಲ ಪಂಗಡಗಳ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯ ಸುಧಾರಣೆಗೆ ಯೋಜನೆಯೊಂದನ್ನು ಜಾರಿಗೊಳಿಸಿದ್ದೇವೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ದುರ್ಬಲ ಬುಡಕಟ್ಟು ಪಂಗಡಗಳ (ಪಿಎಂ–ಪಿವಿಟಿಜಿ) ಅಭಿವೃದ್ಧಿ ಮಿಷನ್‌ ಅನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸುವುದಕ್ಕಾಗಿ ₹15 ಸಾವಿರ ಕೋಟಿ ಮೀಸಲಿಡಲಾಗಿದೆ.

‘ಈ ಯೋಜನೆಯ ಅಡಿಯಲ್ಲಿ ದುರ್ಬಲ ಬುಡಕಟ್ಟು ಸಮುದಾಯದ ಪಂಗಡಗಳಿಗೆ ಮನೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಹಾಡಿಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಲಾಗುತ್ತದೆ. ಆರೋಗ್ಯ, ಶಿಕ್ಷಣ, ರಸ್ತೆ, ದೂರವಾಣಿ ಸಂಪರ್ಕದ ಸುಧಾರಣೆಗೂ ಆದ್ಯತೆ ನೀಡಲಾಗುತ್ತದೆ. 749 ಏಕಲವ್ಯ ಮಾದರಿ ವಸತಿ ಶಾಲೆಗಳಿಗಾಗಿ ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಹಾಗೂ ನೆರವು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT