ಗುರುವಾರ , ಜುಲೈ 16, 2020
23 °C

ಮಕ್ಕಳ ಆಯವ್ಯಯ ಘೋಷಿಸಿದ ಸರ್ಕಾರ: ಏನಿದೆ ಈ ಬಜೆಟ್‌ನಲ್ಲಿ?    

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸರ್ಕಾರ ಮಕ್ಕಳ ಬಜೆಟ್‌ ಮಂಡಿಸಿರುವುದಾಗಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿಕೊಂಡಿದ್ದಾರೆ. 

2020–21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳೆಲ್ಲವನ್ನೂ ಕ್ರೋಢೀಕರಿಸಿ  279 ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ. ಇದಕ್ಕಾಗಿ  ಒಟ್ಟಾರೆ ಬಜೆಟ್‌ನಲ್ಲಿ ಶೇ. 15.28ರಷ್ಟು... ಅಂದರೆ ₹36,340 ಕೋಟಿ ಹಣ ನೀಡಿರುವುದಾಗಿ ಹೇಳಲಾಗಿದೆ.  

ಆದರೆ, 279 ಕಾರ್ಯಕ್ರಮಗಳು ಯಾವುವು? ಯಾವ್ಯಾವ ಕಾರ್ಯಕ್ರಮಕ್ಕೆ ಎಷ್ಟು ಹಣ ನಿಗದಿ ಮಾಡಲಾಗಿದೆ ಎಂಬುದರ ಕುರಿತು ವಿವರಣೆಗಳಿಲ್ಲ. 279 ಕಾರ್ಯಕ್ರಮಗಳು ಶಿಕ್ಷಣ, ಆರೋಗ್ಯ, ಮಹಿಳೆ ಮಕ್ಕಳ ಕಲ್ಯಾಣ ಇಲಾಖೆಗಳ ಕಾರ್ಯಕ್ರಮಗಳನ್ನೂ ಒಳಗೊಂಡಿವೆಯೇ ಅಥವಾ ಪ್ರತ್ಯೇಕವಾಗಿ ಇಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆಯೇ, ₹36,340 ಕೋಟಿ ಹಣವನ್ನು ಪ್ರತ್ಯೇಕವಾಗಿ ನಿಗದಿ ಮಾಡಲಾಗಿದೆಯೇ ಎಂಬುದನ್ನು ತಿಳಿಸಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು