ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್: ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ– ಮತ್ತೊಂದು ವರ್ಷ ವಿಸ್ತರಣೆ

Last Updated 1 ಫೆಬ್ರುವರಿ 2023, 14:26 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡುವ 50 ವರ್ಷಗಳ ಬಡ್ಡಿರಹಿತ ಸಾಲವನ್ನು ಇನ್ನೂ ಒಂದು ವರ್ಷ ಮುಂದುವರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗಾಗಿ ₹ 10 ಲಕ್ಷ ಕೋಟಿಗಳ ಅನುದಾನವನ್ನು ಒದಗಿಸಲಾಗಿದೆ. ಈ ಅನುದಾನ ಜಿಡಿಪಿಯ ಶೇ 3.3 ರಷ್ಟು ಆಗುತ್ತದೆ.

ಹೊಸದಾಗಿ ಸ್ಥಾಪಿಸಲಾದ ಮೂಲಸೌಕರ್ಯ ಹಣಕಾಸು ಸಚಿವಾಲಯವು ಹೆಚ್ಚಿನ ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ‘ಅಮೃತ ಕಾಲ’ಕ್ಕೆ ಪೂರಕವಾಗಿ ಮೂಲಸೌಕರ್ಯ ವರ್ಗೀಕರಣ ಮತ್ತು ಹಣಕಾಸು ಚೌಕಟ್ಟು ಮಾಡಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಅವರು ಹೇಳಿದರು.

ಕಳೆದ ವರ್ಷ ಅ. 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗತಿ ಶಕ್ತಿ - ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಪ್ರಾರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT