ಶನಿವಾರ, ಜುಲೈ 2, 2022
20 °C

ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಒತ್ತು: ಸಚಿವ ಸುಧಾಕರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಕರ್ನಾಟಕ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಒತ್ತು ನೀಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

‘ನವಭಾರತಕ್ಕಾಗಿ ನವಕರ್ನಾಟಕ. ಆರೋಗ್ಯ ಕರ್ನಾಟಕ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡವರ ತುರ್ತು ಚಿಕಿತ್ಸೆಗೆ ತುಮಕೂರಿನಲ್ಲಿ ₹20 ಕೋಟಿ ವೆಚ್ಚದಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ. ಬೆಂಗಳೂರು ನಗರದ ನಾಲ್ಕು ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಯೋಜನೆ. ಘೋಷಿಸಿರುವ ವಿಚಾರವನ್ನೂ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು