ಬೆಂಗಳೂರು: 2022-23ನೇ ಸಾಲಿನ ಬಜೆಟ್ ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ. ಈ ಉಪಕ್ರಮಗಳು ಅತ್ಯಂತ ಸಮಯೋಚಿತ ಮತ್ತು ಅರ್ಥಪೂರ್ಣ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗಬಾರದು ಎಂಬ ಹಿನ್ನೆಲೆಯಲ್ಲಿ ‘ಒಂದು ತರಗತಿ, ಒಂದು ಟಿವಿ ಚಾನೆಲ್’ ಘೋಷಣೆಯಡಿ 200 ಟಿವಿ ವಾಹಿನಿಗಳಿಗೆ ಅವಕಾಶ ನೀಡಿರುವುದು ಸಮಕಾಲೀನ ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಕೈಗೊಂಡಿರುವ ಕ್ರಮ. ಇದರಿಂದ ಮಕ್ಕಳಿಗೆ ಯಾವುದೇ ಅಡೆತಡೆಯಿಲ್ಲದೆ ವಿಶ್ವ ಗುಣಮಟ್ಟದ ಶಿಕ್ಷಣವನ್ನು ಒದಗಿಸಬಹುದು. ಇದು ಎನ್ಇಪಿ ಆಶಯಗಳಿಗೆ ತಕ್ಕಂತಿದೆ ಎಂದಿದ್ದಾರೆ.

ಓದಿ... Union Budget - 2022| ಕೇಂದ್ರ ಬಜೆಟ್ ಬಗ್ಗೆ ಯಾರು ಏನು ಹೇಳಿದರು?

ಜತೆಗೆ, ಕೌಶಲ್ಯಗಳ ಪೂರೈಕೆ ಮತ್ತು ಅವುಗಳ ಸಮರ್ಪಕ ಜಾರಿಗೆ ದೇಶ್ ಇ-ಪೋರ್ಟಲ್ ಸ್ಥಾಪನೆ, ಆನ್‌ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯದ ಸ್ಥಾಪನೆ, ಎವಿಜಿಸಿ ಕಾರ್ಯಪಡೆ ಸ್ಥಾಪನೆ ಮತ್ತು ಸಂಶೋಧನೆ ಹಾಗೂ ನಾವೀನ್ಯತೆಗೆ ಆದ್ಯತೆ ನೀಡಲಾಗಿದೆ.

ಇದಲ್ಲದೆ, ಬ್ಲಾಕ್ ಚೈನ್ ತಂತ್ರಜ್ಞಾನದ ಮೂಲಕ ಕ್ರಿಪ್ಟೋಕರೆನ್ಸಿ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿರುವುದಲ್ಲದೆ, ಡೀಪ್ ಟೆಕ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಯೋಜನೆಗಳನ್ನು ಘೋಷಿಸಿರುವುದರಿಂದ ಜನರ ಜೀವನ ಗುಣಮಟ್ಟ ಸುಧಾರಿಸುತ್ತದೆ. ಇದಕ್ಕೆ ಪೂರಕವಾಗಿ ‘ಸುಗಮ ಜೀವನ’ (ಈಸ್ ಆಫ್ ಲಿವಿಂಗ್) ಸಂಸ್ಕೃತಿಯನ್ನು ರೂಪಿಸಲು ಹೆಜ್ಜೆ ಇಡಲಾಗಿದೆ ಎಂದು ಅಶ್ವತ್ಥನಾರಾಯಣ ನುಡಿದಿದ್ದಾರೆ.

ರಾಜ್ಯಗಳನ್ನು ಅಭಿವೃದ್ಧಿಯ ಪಾಲುದಾರರನ್ನಾಗಿ ಮಾಡಿಕೊಳ್ಳುವ ಮೂಲಕ ನೂತನ ವಿಶೇಷ ಆರ್ಥಿಕ ವಲಯಗಳನ್ನು ಸ್ಥಾಪಿಸುವುದಾಗಿ ಪ್ರಕಟಿಸಿರುವುದರಿಂದ ಬಂಡವಾಳದ ಹರಿವು ನಿರಂತರವಾಗಿ ಇರಲಿದೆ. ಇದರಿಂದ 5 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗ ಸೃಷ್ಟಿ ಕೂಡ ನನಸಾಗಲಿದೆ. ಹಾಗೆಯೇ, ಸ್ಟಾರ್ಟಪ್ ಗಳಿಗೆ ಸಾಲ ಸೌಲಭ್ಯವನ್ನು ಇನ್ನೂ ಒಂದು ವರ್ಷ ಕಾಲ ವಿಸ್ತರಿಸಿರುವುದರಿಂದ ರಾಜ್ಯದಲ್ಲಿ ಇನ್ನೂ ಸಾವಿರಾರು ನವೋದ್ಯಮಗಳು ರಾಜ್ಯದಲ್ಲಿ ನೆಲೆಯೂರಲು ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಓದಿ...

Union Budget 2022: ವಿದ್ಯುತ್ ವಲಯಕ್ಕೆ ದೂರದೃಷ್ಟಿಯ ಸ್ಪರ್ಶ -ಸುನೀಲ್ ಕುಮಾರ್

ಹಸಿದವರ ಹೊಟ್ಟೆಗೆ ತಣ್ಣೀರ ಬಟ್ಟೆ ಹಾಕಿದಂತಿದೆ ಬಜೆಟ್: ಕುಮಾರಸ್ವಾಮಿ ಟೀಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.