ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ವರ್ಷದ ಪರಿಷ್ಕರಣೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಆದಾಯ ತೆರಿಗೆ ಪಾವತಿದಾರರ ಪರಿಷ್ಕೃತ ತೆರಿಗೆ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಿದ್ದಾರೆ. ಅಲ್ಲದೆ, ಆದಾಯ ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದ್ದು, ಶಿಕ್ಷೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಸಣ್ಣ ತೆರಿಗೆದಾರರಿಗೆ ನಿಯಮ ಆಧಾರಿತ ಸ್ವಯಂಚಾಲಿತ ತೆರಿಗೆ ಸಲ್ಲಿಕೆ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಆದಾಯ ತೆರಿಗೆ ಸ್ಲ್ಯಾಬ್ಗಳು ಇಂತಿವೆ

ವಿದೇಶ ಪ್ರವಾಸ ಮಾಡುವವರಿಗೆ ನಿರ್ಮಲಾ ಶುಭ ಸುದ್ದಿ ಕೊಟ್ಟಿದ್ದಾರೆ. ವಿದೇಶ ಪ್ರವಾಸಗಳ ಮೇಲಿನ ಟಿಸಿಎಸ್ ಶೇ 2 ರಷ್ಟು ಇಳಿಕೆ ಮಾಡಿದ್ದಾರೆ. ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇ 5 ರಿಂದ ಶೇ 2ಕ್ಕೆ ಇಳಿಸಲಾಗಿದೆ.

ಮೋಟಾರು ಅಪಘಾತ ಸಂದರ್ಭಗಳಲ್ಲಿ ವಿಮೆ ಕ್ಲೇಮುಗಳಿಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಭಾರತದಲ್ಲಿ ವಾಸಿಸುವ ವಿದೇಶಿ ಪ್ರಜೆಗಳಿಗೆ ಐದು ವರ್ಷಗಳವರೆಗೆ ಭಾರತೇತರ ಗಳಿಕೆಯ ಮೇಲೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ದೇಶದಲ್ಲಿ ಡೇಟಾ ಸೆಂಟರ್ಗಳನ್ನು ಬಳಸಿಕೊಂಡು ವಿಶ್ವದಾದ್ಯಂತ ಗ್ರಾಹಕರಿಗೆ ಕ್ಲೌಡ್ ಸೇವೆಗಳನ್ನು ಒದಗಿಸುವ ವಿದೇಶಿ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಕೆಲವು ಷರತ್ತುಗಳಿಗೆ ಒಳಪಟ್ಟು ಸಂಬಂಧಪಟ್ಟ ಘಟಕಗಳಿಗೆ ತೆರಿಗೆ ರಜೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.