ನವದೆಹಲಿ (ಪಿಟಿಐ): ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಕೆಟ್ಟ ಪರಿಣಾಮ ಕಡಿಮೆ ಮಾಡಲು ಕೇಂದ್ರ ಸರ್ಕಾರ ತೆಗೆದುಕೊಂಡ ಕೆಲವು ಕ್ರಮಗಳ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ವಿತ್ತೀಯ ಕೊರತೆಯು ಅಲ್ಪ ಹೆಚ್ಚಳ ಕಾಣಬಹುದು ಎಂದು ಸಂಶೋಧನಾ ಸಂಸ್ಥೆ ಬಿಎಂಐ ಬುಧವಾರ ಹೇಳಿದೆ.

ವಿತ್ತೀಯ ಕೊರತೆ ಪ್ರಮಾಣವು ದೇಶದ ಜಿಡಿಪಿಯ ಶೇ 4.3ರಷ್ಟು ಆಗಬಹುದು ಎಂದು ಈ ಬಾರಿಯ ಬಜೆಟ್ನಲ್ಲಿ ಅಂದಾಜು ಮಾಡಲಾಗಿದೆ. ಆದರೆ ಅದು ಆ ಅಂದಾಜನ್ನು ಮೀರಿ ಶೇ 4.5ರಷ್ಟು ಆಗಬಹುದು ಎಂದು ಬಿಎಂಐ ಹೇಳಿದೆ.

ಬಹಳ ವಿರಳವಾದ ಸಂಪನ್ಮೂಲಗಳಾದ ಹಾಗೂ ಸೆಮಿಕಂಡಕ್ಟರ್ ಚಿಪ್ಗಳ ಉತ್ಪಾದನೆಯಲ್ಲಿ ಬಳಕೆ ಮಾಡುವ ಹೀಲಿಯಂ ಮತ್ತು ಗಂಧಕದ ರಫ್ತಿನ ಮೇಲೆ ಕೇಂದ್ರ ಸರ್ಕಾರವು ನಿರ್ಬಂಧ ವಿಧಿಸುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

ಗಂಧಕವನ್ನು ರಸಗೊಬ್ಬರಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತದೆ. ಕೃಷಿ ವಲಯದಲ್ಲಿ ಯಾವುದೇ ಅಡ್ಡಿಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಲು ಕೇಂದ್ರವು ಶ್ರಮಿಸಲಿದೆ ಎಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1303284586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.