ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರ್ಷಿಕ ₹ 2.5 ಲಕ್ಷಕ್ಕೂ ಅಧಿಕ ಇಪಿಎಫ್‌ ಮೇಲಿನ ಬಡ್ಡಿಗೆ ತೆರಿಗೆ ವಿನಾಯಿತಿ ಇಲ್ಲ

Last Updated 1 ಫೆಬ್ರುವರಿ 2021, 16:22 IST
ಅಕ್ಷರ ಗಾತ್ರ

ನವದೆಹಲಿ: ವಾರ್ಷಿಕವಾಗಿ ₹ 2.5 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಹಣವು ಉದ್ಯೋಗಿಯ ಭವಿಷ್ಯ ನಿಧಿ (ಇಪಿಎಫ್‌) ಖಾತೆಗೆ ಪಾವತಿಯಾದರೆ, ಅಂತಹ ಖಾತೆಗಳ ಮೇಲಿನ ಬಡ್ಡಿಗೆ ಯಾವುದೇ ತೆರಿಗೆ ವಿನಾಯಿತಿ ಇಲ್ಲವೆಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸೋಮವಾರ ಕೇಂದ್ರ ಬಜೆಟ್‌ ಮಂಡಿಸಿರುವ ಅವರು, 'ಹೆಚ್ಚಿನ ಆದಾಯ ಹೊಂದಿರುವ ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿಯನ್ನು ತರ್ಕಬದ್ದವಾಗಿ ನಿರ್ಬಂಧಿಸಲು ಉದ್ದೇಶಿಸಲಾಗಿದೆ' ಎಂದು ತಿಳಿಸಿದ್ದಾರೆ.

'ವಾರ್ಷಿಕವಾಗಿ ₹ 2.5 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಹಣವು ಉದ್ಯೋಗಿಯ ಭವಿಷ್ಯ ನಿಧಿ (ಪಿ.ಎಫ್‌) ಖಾತೆಗೆ ಪಾವತಿಯಾದರೆ, ಅಂತಹ ಖಾತೆಗಳ ಮೇಲಿನ ಬಡ್ಡಿಗೆ ಯಾವುದೇ ತೆರಿಗೆ ವಿನಾಯಿತಿ ಇರುವುದಿಲ್ಲ. ಇದು ಮುಂದಿನ ವರ್ಷದಿಂದ ಅನ್ವಯವಾಗಲಿದೆ' ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಪ್ರಸ್ತುತವಾಗಿ ಭವಿಷ್ಯ ನಿಧಿಯಿಂದ ಗಳಿಸಿದ ಬಡ್ಡಿಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ.

'ಇಪಿಎಫ್‌ ಎಂಬುದು ಕಾರ್ಮಿಕರ ಕಲ್ಯಾಣಕ್ಕಾಗಿಯೇ ಇದೆ. ಕಡಿಮೆ ಆದಾಯ ಹೊಂದಿರುವ ಕಾರ್ಮಿಕರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ' ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ 2019–20ನೇ ಸಾಲಿನಲ್ಲಿ ಶೇಕಡ 8.5ರಷ್ಟು ಬಡ್ಡಿ ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT